ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ರಥಬೀದಿಯ ಡಾ.ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ಅವರು ಮಾತನಾಡಿದರು.
ಕಾಲೇಜುಗಳಲ್ಲಿ ಮಾದಕದ್ರವ್ಯ ತಡೆ ಸಮಿತಿಯ ಕಾರ್ಯ ನಿರ್ವಹಣೆ, ಅನಾಮಿಕರಾಗಿ ಕ್ಯೂಆರ್ ಕೋಡ್ ಮೂಲಕ ಪೊಲೀಸ್ ಇಲಾಖೆಗೆ ದೂರು ಸಲ್ಲಿಸುವ ಸೌಲಭ್ಯ, ಮಾದಕದ್ರವ್ಯ ಕೇಸಿನಲ್ಲಿ ಸಿಲುಕಿಕೊಂಡರೆ ಆಗುವ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಅವರು ಮಾಹಿತಿ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ., ಕಾಲೇಜಿನ ಅವರಣವನ್ನು ಮಾದಕದ್ರವ್ಯ ಮುಕ್ತಗೊಳಿಸಲು ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆ ವಿವರಿಸಿದರು. ಇದರ ಅಂಗವಾಗಿ ಎಲ್ಲ ವಿದ್ಯಾರ್ಥಿಗಳು ಹಾಗೂ ಹೆತ್ತವರು ಸಹಿ ಮಾಡಿ ಸಲ್ಲಿಸಬೇಕಾದ ವಿಶೇಷ ಮುಚ್ಚಳಿಕೆ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಮಾದಕದ್ರವ್ಯ ತಡೆ ಸಮಿತಿ ಸಂಯೋಜಕ ಡಾ. ಲೋಕೇಶ್‌ನಾಥ್ ಬಿ., ಸಮಿತಿಯ ಇತರ ಸದಸ್ಯರು, ಬೋಧಕ ವರ್ಗದವರು ಇದ್ದರು. ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಸ್ವಾಗತಿಸಿದರು. ಐಕ್ಯೂಎಸಿ ಸಹ-ಸಂಯೋಜಕಿ ಡಾ. ಜ್ಯೋತಿಪ್ರಿಯಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು.