ಚಿಕ್ಕನರಗುಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯ ವಿರುದ್ಧ ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯಿತು.
ಮಾದಕ ವಸ್ತುಗಳ ಪೂರೈಕೆ ವಿರುದ್ಧ ವಿಶೇಷ ಅಭಿಯಾನನರಗುಂದ: ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯ ಕ್ಷಣಿಕ ಸುಖಕ್ಕೆ ಬಲಿಯಾಗಬಾರದೆಂದು ಸಿಪಿಐ ಮಂಜುನಾಥ ನಡುವಿನಮನಿ ಹೇಳಿದರು. ಅವರು ಶನಿವಾರ ತಾಲೂಕಿನ ಚಿಕ್ಕನರಗುಂದ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಠಾಣೆ ಹಾಗೂ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯ ವಿರುದ್ಧ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಆನಂತರ ಮಾತನಾಡಿದರು.
ಇಂದಿನ ದಿನಗಳಲ್ಲಿ ಯುವಕರು ಹೆಚ್ಚಾಗಿ ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆ ಮಾಡುವ ಯುವ ಸಮುದಾಯ ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದರಿಂದ ಸಮಾಜದ ಸ್ವಾಸ್ಥ್ಯ ಕೂಡ ಹಾಳಾಗುತ್ತಿದೆ ಎಂದರು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು ಹದಿ ಹರೆಯದ ವಯಸ್ಸಿನಲ್ಲಿ ಕ್ಷಣಿಕ ಸುಖ ನೀಡುವ ಮಾದಕ ವಸ್ತುಗಳ ಮೋಹಕ್ಕೆ ಬಿದ್ದು ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ಶರಣಬಸಪ್ಪ ಹಳೇಮನಿ, ಕಾಲೇಜು ಪ್ರಾಂಶುಪಾಲರಾದ ಎಸ್. ವ್ಹಿ. ದಂಡನಾಯ್ಕರ, ಕಾಲೇಜು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.