ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ: ಶರಣು ಪಾಟೀಲ

KannadaprabhaNewsNetwork |  
Published : Aug 25, 2026, 02:45 AM IST
ಕಾರ್ಯಕ್ರಮದಲ್ಲಿ ಶರಣು ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಮುಳಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಸುಂಕಾಪುರ ಮಾತನಾಡಿ, ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ. ಗೆಲುವಿನಿಂದ ಅಹಂಕಾರ ಪಡದೆ, ಸೋಲಿನಿಂದ ನಿರಾಶರಾಗದೆ ಮುಂದಿನ ಅವಕಾಶಕ್ಕಾಗಿ ಸಿದ್ಧರಾಗಬೇಕು ಎಂದರು.

ಮುಳಗುಂದ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆಯಿಂದ ಶಿಸ್ತು, ಸಮಯಪ್ರಜ್ಞೆ, ನಾಯಕತ್ವ ಗುಣ ಹಾಗೂ ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ ಎಂದು ಬಿಜೆಪಿ ಮುಖಂಡ ಶರಣು ಪಾಟೀಲ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆ(ಆರ್‌ಎಂಎಸ್ಎ) ಆವರಣದಲ್ಲಿ ಸೋಮವಾರ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯದಿಂದ ನಡೆದ 2026- 27ನೇ ಸಾಲಿನ ಪ್ರೌಢಶಾಲೆಗಳ ಮುಳಗುಂದ ವಲಯ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಮುಳಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಸುಂಕಾಪುರ ಮಾತನಾಡಿ, ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ. ಗೆಲುವಿನಿಂದ ಅಹಂಕಾರ ಪಡದೆ, ಸೋಲಿನಿಂದ ನಿರಾಶರಾಗದೆ ಮುಂದಿನ ಅವಕಾಶಕ್ಕಾಗಿ ಸಿದ್ಧರಾಗಬೇಕು. ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದೇ ದೊಡ್ಡ ಸಾಧನೆ. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಕಡಿಮೆ ಮಾಡಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ನೀಡಬೇಕು ಎಂದರು.

ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮೇಲಿದೆ ಎಂದರು.

ಶಾಲಾ ಮುಖ್ಯೋಪಾಧ್ಯಾಯ ಎಸ್.ಎಚ್. ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಕ್ರೀಡಾ ಧ್ವಜವನ್ನು ಭೂದಾನಿ ಎನ್‌.ಆರ್. ದೇಶಪಾಂಡೆ ನೆರವೇರಿಸಿದರು. ಕ್ರೀಡಾ ಜ್ಯೋತಿಯನ್ನು ಹಿರಿಯರಾದ ಎಂ.ಡಿ. ಬಟ್ಟೂರ ಸ್ವೀಕರಿಸಿದರು. ಸಾಧಕರು, ದಾನಿಗಳನ್ನು ಸನ್ಮಾನಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಮಾದೇವಪ್ಪ ಮಾನೇಗರ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಅಶೋಕ ಸೊನಗೋಜಿ, ಷಣ್ಮುಖಪ್ಪ ಬಡ್ನಿ, ಶಿವಶಿಂಪರ, ಎಸ್‌.ಸಿ. ಅಮರಶೆಟ್ಟರ, ವಿಜಯ ನೀಲಗುಂದ, ಸಂಜಯ ನೀಲಗುಂದ, ಅಶೋಕ ಹುಣಸಿಮರದ, ಬಸವರಾಜ ಹಾರೋಗೇರಿ, ಮಹಾದೇವಪ್ಪ ಗಡಾದ, ಇಮಾಮಸಾಬ ಶೇಖ, ಜೆ.ವಿ. ಬಾವಿಕಟ್ಟಿ, ಆರ್‌.ವಿ. ಡಂಬಳ, ಮಹಾಂತಪ್ಪ ನೀಲಗುಂದ ಸೇರಿದಂತೆ ಮುಳಗುಂದ ವಲಯದ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿತ್ಯವೂ ಸೂರ್ಯೋಪಾಸನೆ ನಡೆಯಲಿ: ಸ್ವರ್ಣವಲ್ಲೀ ಶ್ರೀ
ಸಿದ್ಧಗೊಳ್ಳುತ್ತಿವೆ ತರಹೇವಾರಿ ಗಣೇಶನ ಮೂರ್ತಿಗಳು