ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಹಾಗೂ ನೈತಿಕ ಮೌಲ್ಯಗಳನ್ನೂ ಅಳವಡಿಸಿಕೊಳ್ಳಬೇಕು ಎಂದು ಸಿಆರ್‌ಪಿ ಮೃತ್ಯುಂಜಯ ಪೂಜಾರ ಹೇಳಿದರು.
ಡಂಬಳ: ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಹಾಗೂ ನೈತಿಕ ಮೌಲ್ಯಗಳನ್ನೂ ಅಳವಡಿಸಿಕೊಳ್ಳಬೇಕು ಎಂದು ಸಿಆರ್‌ಪಿ ಮೃತ್ಯುಂಜಯ ಪೂಜಾರ ಹೇಳಿದರು.
ಡಂಬಳ ಗ್ರಾಮದ ಸರಕಾರಿ ಮಾದರಿ ಕೇಂದ್ರ ಶಾಲೆಯ ಶಾಲಾ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.ಶಿಕ್ಷಕರ ಜೊತೆಗೆ ಪಾಲಕರೂ ಮಕ್ಕಳ ಬಗೆಗೆ ಕಾಳಜಿ ವಹಿಸಿದಾಗ ಉತ್ತಮ ಫಲಿತಾಂಶ ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯೋಪಾಧ್ಯಾಯ ವೈ.ಎಸ್. ಚಲವಾದಿ, ಎಸ್‌ಡಿಎಂಸಿ ಅಧ್ಯಕ್ಷ ಸೋಮಪ್ಪ ತಳಗೇರಿ ಮಾತನಾಡಿ, ವಿದ್ಯೆ ಮತ್ತು ಸಂಸ್ಕಾರ ಮುಖ್ಯ. ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಲು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳೂ ಅಗತ್ಯ ಎಂದು ಹೇಳಿದರು.
ಹಿರಿಯ ಶಿಕ್ಷಕ ಎಂ.ಎಂ. ಬಂಡಿ ಮಾತನಾಡಿ, ವಿದ್ಯೆ ಮಾತ್ರವೇ ಜೀವನವನ್ನು ಉಜ್ವಲಗೊಳಿಸುವ ಏಕೈಕ ಶಕ್ತಿ ಎಂದು ಹೇಳಿದರು.
ಶಿಕ್ಷಕ ಮಹೇಶ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಜನಪದ ನೃತ್ಯ, ನಾಟಕ ಪ್ರದರ್ಶನ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳ ನೃತ್ಯ ವಿಶೇಷ ಆಕರ್ಷಣೆಯಾಗಿತ್ತು. ಪಾಲಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳಿಗೆ ಉತ್ತೇಜನ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.