ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು: ಕೆ.ಎಂ.ಉದಯ್

KannadaprabhaNewsNetwork |  
Published : Jan 27, 2025, 12:47 AM IST
26ಕೆಎಂಎನ್ ಡಿ26 | Kannada Prabha

ಸಾರಾಂಶ

ನಮ್ಮ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನ, ತಂತ್ರಜ್ಞಾನ, ಬಾಹ್ಯ ಕಾಶ ಹಾಗೂ ಶಿಕ್ಷಣ ಕ್ಷೇತ್ರಗಳ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸುತ್ತಿದೆ. ಸರ್ಕಾರ ರಾಜ್ಯದಲ್ಲಿ ಕ್ರಿಕೆಟ್ ಹೊರತಾಗಿ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುವುದು ಅಗತ್ಯವಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮಾತ್ರವಲ್ಲದೇ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದಲ್ಲಿ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತರಾದ ತಾಲೂಕಿನ ಮೆಣಸಗೆರೆ ಗ್ರಾಮದ ಜ್ಞಾನಮುದ್ರ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ನಮ್ಮ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನ, ತಂತ್ರಜ್ಞಾನ, ಬಾಹ್ಯ ಕಾಶ ಹಾಗೂ ಶಿಕ್ಷಣ ಕ್ಷೇತ್ರಗಳ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸುತ್ತಿದೆ. ಸರ್ಕಾರ ರಾಜ್ಯದಲ್ಲಿ ಕ್ರಿಕೆಟ್ ಹೊರತಾಗಿ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುವುದು ಅಗತ್ಯವಿದೆ. ಕ್ರೀಡಾಪಟುಗಳಿಗೆ ಗುಣಮಟ್ಟದ ತರಬೇತಿ ನೀಡಿ ಪ್ರತಿಭಾವಂತರಿಗೆ ಅವಕಾಶ ನೀಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕ್ರೀಡಾ ಸಾಧನೆ ಮತ್ತಷ್ಟು ಹೆಚ್ಚಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ಜ್ಞಾನ ಮುದ್ರಾ ಶಾಲೆ ವಿದ್ಯಾರ್ಥಿಗಳಾದ ಎಚ್.ಎಸ್.ಪುಣ್ಯಶ್ರೀ, ಎಚ್. ಎನ್.ಬಿಂದುಶ್ರೀ, ಚಿಂತನಾ, ಡಿ.ಎಂ. ಯುಕ್ತಾ, ಜನ್ಯ ಬಿರಾಜು ಅವರುಗಳನ್ನು ತಾಲೂಕ ಆಡಳಿತದ ವತಿಯಿಂದ ನೆನಪಿನ ಕಾಣಿಕೆಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಡಾ. ಸ್ಮಿತಾ ರಾಮು, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳಿರಯ್ಯ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ನಿವೃತ್ತ ಶಿಕ್ಷಕ ಎಂ.ಮಲ್ಲಯ್ಯ. ಶಿಕ್ಷಣ ಸಂಸ್ಥೆ ಪ್ರಾಂಶುಪಾಲೆ ಪ್ರಭಾವತಿ, ಮುಖ್ಯ ಶಿಕ್ಷಕಿ ಶೃತಿ, ದೈಹಿಕ ಶಿಕ್ಷಕ ಮನು ಹಾಗೂ ವಿದ್ಯಾ ಮಂದಿರದ ಆಡಳಿತ ಮಂಡಳಿ ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ