ಕನ್ನಡಪ್ರಭ ವಾರ್ತೆ ಕೊರಟಗೆರೆ
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ವರ್ಷದ ಜನ್ಮದಿನದ ಪ್ರಯುಕ್ತ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣನವರ ಸಹಕಾರದಿಂದ ಎನ್‌ಡಿಎ ಪಕ್ಷವು ಸರ್ಕಾರಿ ಮಾಧ್ಯಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಮಾಡಿ ಮಾತನಾಡಿದರು.
ವಿ.ಸೋಮಣ್ಣನವರು ತುಮಕೂರು ಜಿಲ್ಲೆಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಬಿ.ಎಚ್ ಅನಿಲ್‌ಕುಮಾರ್ ಮಾತನಾಡಿ, ಉದ್ಯೋಗ ಅರಸಿ ಹೊರ ದೇಶಗಳಿಗೆ ಹೋಗುವ ಬದಲು ನಮ್ಮ ದೇಶದಲ್ಲಿನ ಸಾಕಷ್ಟು ಅವಕಾಶಗಳನ್ನು ಬಳಕೆ ಮಾಡಿಕೊಂಡು ದೇಶದ ಅಭಿವೃದ್ಧಿಗೆ ಇವತ್ತಿನ ಪೀಳಿಗೆ ಮುಂದಾಗಬೇಕು. ಇದರ ಜೊತೆ ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಿ ಈ ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕಿದೆ. ಪ್ರಧಾನ ಮಂತ್ರಿಗಳ ವಿಕಸಿತ ಭಾರತ ಕನಸನ್ನು ಯುವಕ ಯುವತಿಯರು ನನಸು ಮಾಡಬೇಕು ಎಂದು ಹೇಳಿದರು.
ಸಾವಿರಾರು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ :
ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರುದ್ರೇಶ್, ಪ್ರಧಾನ ಕಾರ್ಯದರ್ಶಿ ದಾಸಲುಕುಂಟೆ ರಘು, ಮಹೇಂದ್ರ, ಜೆಡಿಎಸ್ ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ್, ಜೆಡಿಎಸ್ ಉಪಾಧ್ಯಕ್ಷ ಕೋಡ್ಲಹಳ್ಳಿ ವೆಂಕಟೇಶ್, ಲಕ್ಷ್ಮಣ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪವನ್‌ಕುಮಾರ್, ಪ.ಪಂ ಸದಸ್ಯ ಪ್ರದೀಪ್‌ಕುಮಾರ್, ಲಕ್ಷ್ಮೀನಾರಾಯಣ್, ಮುಖಂಡರಾದ ರಮೇಶ್, ದಾಡಿವೆಂಕಟೇಶ್, ನರೇಂದ್ರಬಾಬು, ರಂಗನಾಥ್, ಕುರುಡುಗಾನಹಳ್ಳಿ ರಂಜಿತ್ ಸಿದ್ದರಾಜು (ಪೈಲ್ವಾನ್), ಚೇತನ್, ದಯಾನಂದ್, ಗುರುದತ್ತ, ಸೇರಿದಂತೆ ಇತರರು ಇದ್ದರು.