ಧಾರವಾಡ:
ಇಲ್ಲಿಯ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಸಭಾಭವನದಲ್ಲಿ ನೂತನವಾಗಿ ಆಯ್ಕೆಯಾದ ಪ್ರಾಂಶುಪಾಲರಿಗಾಗಿ ನಡೆದ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.
ಕನ್ನಡ ನಮ್ಮ ಮಾತೃಭಾಷೆ ನಿಜ. ಆದರೆ, ಇಂದು ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮುನ್ನುಗ್ಗಬೇಕು ಎಂದರೆ ಅವರಿಗೆ ಆಂಗ್ಲ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯಗತ್ಯ. ತರಬೇತಿ ಪಡೆದ ಪ್ರತಿಯೊಬ್ಬ ಪ್ರಾಂಶುಪಾಲರು ತಮ್ಮ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಆಂಗ್ಲ ಭಾಷೆಯಲ್ಲಿಯೇ ಸಂವಹನ ಮಾಡಬೇಕು. ಆ ರೀತಿ ಅವರನ್ನು ಪ್ರೇರೇಪಿಸಬೇಕು. ಅಂದಾಗ ಅಳುಕು-ಅಂಜಿಕೆ ಇಲ್ಲದೇ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಸ್ಪರ್ಧಾತ್ಮಕ ಪಠ್ಯಕ್ರಮ:
ನೂತನ ಪ್ರಾಂಶುಪಾಲರ ನೇರ ನೇಮಕಾತಿ ಮಾಡಿಕೊಳ್ಳುವಲ್ಲಿ ಸಾಕಷ್ಟು ಸವಾಲು ಎದುರಿಸಬೇಕಾಯಿತು. ಆದರೆ, ಯಾವುದಕ್ಕೂ ಜಗ್ಗದೇ ಎಲ್ಲವನ್ನೂ ಸರಳವಾಗಿ ನಿಭಾಯಿಸಿದ್ದೇವೆ. ಆಯ್ಕೆಯಾದ ನೀವೆಲ್ಲರೂ ಶೈಕ್ಷಣಿಕವಾಗಿ ಮಾತ್ರ ಸದೃಢರಿದ್ದರೆ ಸಾಲದು. ಬದಲಿಗೆ ಆಡಳಿತಾತ್ಮಕವಾಗಿಯೂ ಚಾಕಚಕ್ಯತೆ ಹೊಂದಿರಬೇಕು. ಕಾಲೇಜಿನಲ್ಲಿಯ ಪ್ರತಿಯೊಬ್ಬ ಸಿಬ್ಬಂದಿ ಜತೆಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಪಣ ತೊಡಬೇಕು. ಸರ್ಕಾರಿ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರೇ ಹೆಚ್ಚು. ಅವರ ಭವಿಷ್ಯ ರೂಪಿಸುವಲ್ಲಿ ನಿಮ್ಮೆಲ್ಲರ ಜವಾಬ್ದಾರಿ ಹೆಚ್ಚಿದೆ ಎಂದರು.
ಉತ್ತಮ ಬೋಧನೆ ಮಾಡಿ:
ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ನಿರ್ದೇಶಕಿ ಡಾ. ಎ.ಎಚ್.ಎಂ. ವಿಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ತರಬೇತಿ ಪಡೆದ ನೂತನ ಪ್ರಾಂಶುಪಾಲರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕವಿವಿ ಕುಲಪತಿ ಪ್ರೊ. ಎ.ಎಂ. ಖಾನ್, ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಡಾ. ರಮೇಶ ರಟಗೇರಿ, ಡೀನ್ ಡಾ. ಅರುಂಧತಿ, ಖರೀಮುನ್ನಿಸಾ ಸಯ್ಯದ, ಸುಧಾ ಹೆಗಡೆ ಸೇರಿದಂತೆ ಇತರರು ಇದ್ದರು.