ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ: ನ್ಯಾ. ನಿತಿನ್ ಯಶವಂತ ರಾವ್

KannadaprabhaNewsNetwork |  
Published : Jun 22, 2026, 02:45 AM IST
ಎಸ್‌ಎಸ್‌ಎಲ್ಸಿ - ಪಿಯುಸಿಯ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಿತು | Kannada Prabha

ಸಾರಾಂಶ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇದ್ದು ಜೀವನದಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶವಂತ ರಾವ್ ಹೇಳಿದರು.

ಉಡುಪಿ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇದ್ದು ಜೀವನದಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶವಂತ ರಾವ್ ಹೇಳಿದರು. ಕಲ್ಯಾಣಪುರದಲ್ಲಿ ಪ್ಲಾನೆಟ್ ಮಾರ್ಸ್ ಫೌಂಡೇಶನ್ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವಾ ಮಾತನಾಡಿ ಯಾವುದೋ ಕಾರಣಗಳಿಗಾಗಿ ಅನಾಥರಾಗಿ, ನಿರ್ಗತಿಕರಾಗಿರುವ, ಅವಕಾಶವಂಚಿತ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಲು ರಾಧಾ ಬಾಬು ಫೌಂಡೇಶನ್ ಪ್ರಾಯೋಜಿತ ಪ್ಲಾನೆಟ್ ಮಾರ್ಸ್ ಸಂಸ್ಥೆ ಕಳೆದ ಹತ್ತು ವರ್ಷಗಳಿಂದ ಶ್ರಮಿಸುತ್ತಿದೆ. ಇಲ್ಲಿನ ಶಿಕ್ಷಣ ಪಡೆದು ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳು ಮುಂದೆ ಸಂಸ್ಥೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ಉಡುಪಿ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ಬಿ. ಕೆ. ನಾರಾಯಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಾಲನಿಕೇತನ ಸಂಸ್ಥೆ ಉಡುಪಿ ಇದರ ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ, ಪ್ಲಾನೆಟ್ ಮಾರ್ಸ್ ಸಂಸ್ಥೆಯ ಅಧ್ಯಕ್ಷೆ ದೀಪ್ತಿ ಸುವರ್ಣ, ಉಪಾಧ್ಯಕ್ಷ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ರೋಸ್ಲಿನ್ ಕ್ರಾಸ್ತಾ, ಸಂಸ್ಥೆಯ ಟ್ರಸ್ಟಿಗಳು ಉಪಸ್ಥಿತರಿದ್ದರು. ಗೀತಾ, ಸೌಜನ್ಯ ಮತ್ತು ಅನುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ: ಆ.7, 8ರಂದು ‘ಆಳ್ವಾಸ್‌ ಪ್ರಗತಿ-2026’ ಬೃಹತ್‌ ಉದ್ಯೋಗ ಮೇಳ
ಮೆಸ್ಕಾಂ ಖಾಸಗೀಕರಣ ತಕ್ಷಣ ನಿಲ್ಲಿಸಿ: ಯೂನಿಯನ್‌ ಮನವಿ