ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಹಾಗೂ ಅಚರ್ಡ್ ಮದ್ಯವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ಗುರುವಾರ ಆಯೋಜಿಸಲಾಗಿದ್ದ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತಿಚಿನ ದಿನಗಳಲ್ಲಿ ಅಪ್ರಾಪ್ತರು ವಿವಿಧ ರೀತಿಯ ಮಾದಕ ವಸ್ತು ಸೇವನೆಯನ್ನು ಹವ್ಯಾಸ ಮಾಡಿಕೊಂಡು ಕಳ್ಳತನ, ದರೋಡೆ ಸೇರಿದಂತೆ ಮತ್ತಿತರ ಅಪರಾಧಗಳಲ್ಲಿ ತೊಡಗಿಕೊಂಡು ವಿದ್ಯಾಭ್ಯಾಸದ ಕಡೆಗೆ ಗಮನ ವಹಿಸದೆ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಶಿಕ್ಷಕರು ಮತ್ತು ಪೋಷಕರು ತಮ್ಮ ಮಕ್ಕಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ ಅವುಗಳಿಂದ ದೂರ ಉಳಿಯುವಂತೆ ಮಾಡಬೇಕು ಎಂದರು.ಅಪ್ರಾಪ್ತ ವಯಸ್ಕರಿಗೆ ಮಾದಕ ವಸ್ತುಗಳನ್ನು ಮಾರುವುದು ಕಾನೂನು ಬಾಹಿರವಾಗಿದ್ದು, ಅಪ್ರಾಪ್ತರಿಗೆ ಮಾದಕ ವಸ್ತುಗಳನ್ನು ಮಾರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರಲ್ಲದೆ, ಆಕರ್ಷಣೆ, ಕುತೂಹಲ ಮತ್ತಿತರ ಕಾರಣಗಳಿಂದ ಮಾದಕ ವ್ಯಸನಿಗಳಾಗಿದ್ದರೆ ಸಮಾಲೋಚನಾ ಕೇಂದ್ರಗಳಿಗೆ ತೆರಳಿ ವ್ಯಸನ ಮುಕ್ತರಾಗಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ.ಹಿ. ಮಂತರಾಜು, ದುಶ್ಚಟಗಳಿಗೆ ಒಳಗಾಗಿರುವವರನ್ನು ಮುಕ್ತಿಗೊಳಿಸುವ ಉದ್ದೇಶದಿಂದ ಜೋಳಿಗೆ ಹಿಡಿದು ಮದ್ಯಪಾನ, ತಂಬಾಕು ಸೇರಿದಂತೆ ಎಲ್ಲಾ ದುಶ್ಚಟಗಳ ವಸ್ತುಗಳನ್ನು ಜೋಳಿಗೆಗೆ ಹಾಕಿಸಿಕೊಂಡು, ಇನ್ನೆಂದೂ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿಸುವ ಮೂಲಕ ಜನರ ಮನಃಪರಿವರ್ತನೆ ಮಾಡಿದ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನದ ಅಂಗವಾಗಿ ಆಗಸ್ಟ್ ೧ರಂದು ರಾಜ್ಯಾದಾದ್ಯಂತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸರ್ಕಾರಿ ಪದವಿ ಪೂರ್ವ ಹಾಗೂ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.