ವಿದ್ಯಾರ್ಥಿಗಳು ಸಂಘ ಸಂಸ್ಥೆಗಳ ನೆರವು ಸದ್ಬಳಸಿಕೊಳ್ಳಿ

KannadaprabhaNewsNetwork |  
Published : Jun 22, 2025, 11:48 PM IST
ಪೊಟೋ೨೧ಸಿಪಿಟ೩: ತಾಲೂಕಿನ ಮುದಗೆರೆ ಪ್ಲಾಂಟೇಶನ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾರತ ವಿಕಾಸ ಪರಿಷತ್ತು ಕಣ್ವ ಶಾಖೆಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ಚನ್ನಪಟ್ಟಣ: ಸರ್ಕಾರ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿದ್ದು, ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ನೀಡುವ ನೆರವನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ಸತ್ಪ್ರಜೆಗಳಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ತಿಳಿಸಿದರು.

ಚನ್ನಪಟ್ಟಣ: ಸರ್ಕಾರ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿದ್ದು, ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ನೀಡುವ ನೆರವನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ಸತ್ಪ್ರಜೆಗಳಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ತಿಳಿಸಿದರು.

ಭಾರತ ವಿಕಾಸ ಪರಿಷತ್ತು ಕಣ್ವ ಶಾಖೆ ತಾಲೂಕಿನ ಮುದಗೆರೆ ಪ್ಲಾಂಟೇಶನ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಕಲಿಕಾ ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು,

ಭಾರತ ವಿಕಾಸ ಪರಿಷತ್ತು ಹಲವಾರು ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಗತ್ಯ ಕಲಿಕಾ ಸಾಧನಗಳನ್ನು ವಿತರಣೆ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮತ್ತು ಆ ಮೂಲಕ ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಭಾವಿಪ ಅಧ್ಯಕ್ಷ ಪುಟ್ಟಸ್ವಾಮಿಗೌಡ(ಡಿಪಿಎಸ್) ಮಾತನಾಡಿ, ಶಿಕ್ಷಣ ದೇಶದ ಭವಿಷ್ಯವನ್ನು ರೂಪಿಸುವ ಪ್ರಮುಖ ಅಸ್ತ್ರವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣದ ಸೌಲಭ್ಯ ದೊರೆಯಬೇಕು, ವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ ಶ್ರದ್ಧೆ ಹಾಗೂ ಛಲದಿಂದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉನ್ನತ ಮಟ್ಟದ ವ್ಯಾಸಂಗ ಮಾಡಲು ಸಾಧ್ಯ ಎಂದು ತಿಳಿಸಿದರು.

ಭಾವಿಪ ಕಾರ್ಯದರ್ಶಿ ಯೋಗೇಶ್ ಚಕ್ಕೆರೆ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆ ಇದೆ. ಮಕ್ಕಳು ಶ್ರದ್ಧೆಯಿಂದ ಶಿಕ್ಷಣದತ್ತ ಗಮನ ಹರಿಸಿ ಉತ್ತಮ ಅಂಕಗಳನ್ನು ಪಡೆದು ಉನ್ನತ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಬೇಕು ಎಂದರು.

ಭಾವಿಪ ಸಂಘಟನಾ ಕಾರ್ಯದರ್ಶಿ ವಸಂತಕುಮಾರ್, ತಾಲೂಕಿನ ಮುದುಗೆರೆ ಪ್ಲಾಂಟೇಶನ್, ಬೆಳಕೆರೆ, ಪುಟ್ಟಪ್ಪನದೊಡ್ಡಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅಗತ್ಯವಿರುವ ನೋಟ್ ಬುಕ್, ಪೆನ್ನು, ಪೆನ್ಸಿಲ್, ರಬ್ಬರ್, ಸ್ಕೇಲ್, ಜಾಮಿಟ್ರಿ ಬಾಕ್ಸ್ ಇನ್ನಿತರೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

ಭಾ.ವಿ.ಪ ಕಣ್ವ ಶಾಖೆ ಖಜಾಂಚಿ ವಿ.ಟಿ.ರಮೇಶ್, ಪ್ರಾಂತ್ಯ ಸಂಸ್ಕಾರ ವಿಭಾಗದ ಪದಾಧಿಕಾರಿ ಬೆಸ್ಕಾಂ ಶಿವಲಿಂಗಯ್ಯ, ಉಪಾಧ್ಯಕ್ಷ ಕರಿಯಪ್ಪ, ಗೌರವಾಧ್ಯಕ್ಷ ಬಿ.ಎನ್.ಕಾಡಯ್ಯ, ಸಂಚಾಲಕ ಕೃಷ್ಣಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜು, ಮುಖ್ಯ ಶಿಕ್ಷಕರಾದ ರಮೇಶ್ ಕುಮಾರ್, ಗಿರಿಜಾ, ಶಾಂತಮ್ಮ ಇದ್ದರು.

ಪೊಟೋ೨೧ಸಿಪಿಟ೩:

ಚನ್ನಪಟ್ಟಣ ತಾಲೂಕಿನ ಮುದಗೆರೆ ಪ್ಲಾಂಟೇಶನ್ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ವಿಕಾಸ ಪರಿಷತ್‌ ಕಣ್ವ ಶಾಖೆಯಿಂದ ಶೈಕ್ಷಣಿಕ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

PREV