ಸೀತೂರಿನಲ್ಲಿ ನಡೆಯುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಕ್ಯಾಂಪ್
ನಾಗಲೋಟದಿಂದ ಓಡುತ್ತಿರುವ ಮಾಹಿತಿ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಬದುಕಿನ ಅಮೂಲ್ಯವಾದ ಶಿಕ್ಷಣ ಪಡೆಯಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಗುರುವಾರ ಸಂಜೆ ಸೀತೂರಿನಲ್ಲಿ ನಡೆಯುಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.ಶಿಬಿರದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಿಗೂ ಎಂಜಿನಿಯರ್, ಡಾಕ್ಚರ್ ಆಗಲು ಸಾಧ್ಯವಿಲ್ಲ. ನಿಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಮುನ್ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಸಣ್ಣ ಕಾರಣಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ನಡೆಯುತ್ತಿದೆ. ಇದು ಸರಿಯಲ್ಲ. ಜಗತ್ತು ವಿಶಾಲವಾಗಿದ್ದು ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಮಕ್ಕಳು ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು. ಎನ್.ಎಸ್.ಎಸ್ ಶಿಬಿರದಿಂದ ನಾಯಕತ್ವ ಗುಣ ಬೆಳೆಯುತ್ತದೆ. ಗ್ರಾಮದ ಜನರೊಂದಿಗೆ ಬೆರೆಯುವುದರಿಂದ ಹೊರಗಿನ ಪ್ರಪಂಚದ ಅರಿವು ಉಂಟಾಗುತ್ತದೆ. ವಿದ್ಯಾರ್ಥಿಗಳು ಧರ್ಮ, ಜಾತಿ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಾವು ಭಾರತೀಯರು ಎಂಬ ಭಾವನೆಯಿಂದ ಎಲ್ಲರೂ ಒಟ್ಟಾಗಿ ಬದುಕಬೇಕು ಎಂದು ಕರೆ ನೀಡಿದರು.ಈಗಾಗಲೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಗೆ ಆಡಿಟೋರಿಯಂ, ರಸ್ತೆ, ಕುಡಿಯುವ ನೀರಿನ ವ್ಯವಸ್ಥೆಗೆ ಅನುದಾನ ಮಂಜೂರು ಮಾಡಿದ್ದೇನೆ ಎಂದರು.
ಅತಿಥಿಯಾಗಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಎಲ್. ಶೆಟ್ಟಿ ಮಾತನಾಡಿ, ಶಾಸಕ ಟಿ.ಡಿ.ರಾಜೇಗೌಡರು ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಕಾಲೇಜಿನ 10 ಎಕರೆ ಜಾಗದಲ್ಲಿ ಆಡಿಟೋರಿಯಂ ನಿರ್ಮಾಣಕ್ಕೆ ಶಾಸಕರು ಹಣ ಮಂಜೂರು ಮಾಡಿದ್ದಾರೆ. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಸಹ ರಸ್ತೆಗೆ ಅನುದಾನ ನೀಡಿದ್ದಾರೆ. ಎನ್.ಎಸ್.ಎಸ್.ಕ್ಯಾಂಪಿನ ಶಿಬಿರಾರ್ಥಿಗಳಿಗೆ ಸಮವಸ್ತ್ರ ನೀಡಿದ್ದೇವೆ ಎಂದರು.ಸಭೆ ಅಧ್ಯಕ್ಷತೆಯನ್ನು ಕಾಲೇಜಿನ ಉಪನ್ಯಾಸಕಿ ಸ್ವಾತಿ ವಹಿಸಿದ್ದರು. ಯಕ್ಷಗಾನ ಕಲಾವಿದ ಅನಂತಪದ್ಮನಾಭ,ಸ್ವಾತಂತ್ರ ಹೋರಾಟಗಾರ ಎಸ್.ಡಿ.ವಿ.ಗೋಪಾಲರಾವ್, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜ ಭಟ್,ನಾಗರಮಕ್ಕಿ ಶಾಲೆ ಶಿಕ್ಷಕ ರಾಜಶೇಖರ್, ನಾಗರಮಕ್ಕಿ ಶಾಲೆ ಎಸ್.ಡಿಎಂಸಿ ಅಧ್ಯಕ್ಷ ಮಹೇಶ್, ಸುದೀಪ್ , ಐಶ್ವರ್ಯ , ಅಂಜುಂ ಇದ್ದರು.