ವಿದ್ಯಾರ್ಥಿಗಳು ತಾಳ್ಮೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದು ಉತ್ತಮ ಅಂಕ ಪಡೆಯಿರಿ: ಲಕ್ಷ್ಮಣ ಶೆಟ್ಟಿ ಕರೆ

KannadaprabhaNewsNetwork | Published : Mar 7, 2025 12:47 AM

ಸಾರಾಂಶ

ನರಸಿಂಹರಾಜಪುರ, ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳು ಗಾಬರಿ ಮಾಡಿಕೊಳ್ಳದೆ ತಾಳ್ಮೆಯಿಂದ ಪರೀಕ್ಷೆ ಬರೆದು ಉತ್ತಮ ಅಂಕ ಪಡೆದು ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ಕರೆ ನೀಡಿದರು.

ಕೆಪಿಎಸ್ ಪ್ರೌಢ ಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರು, ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ,

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳು ಗಾಬರಿ ಮಾಡಿಕೊಳ್ಳದೆ ತಾಳ್ಮೆಯಿಂದ ಪರೀಕ್ಷೆ ಬರೆದು ಉತ್ತಮ ಅಂಕ ಪಡೆದು ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ಕರೆ ನೀಡಿದರು.

ಗುರುವಾರ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆದ ವರ್ಗಾಯಿತ ಶಿಕ್ಷಕರು ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಎಂಬುದು ಪ್ರಮುಖ ಘಟ್ಟ. ತಾಳ್ಮೆಯಿಂದ ಪರೀಕ್ಷೆ ಬರೆಯಬೇಕು. ಬೇಸಿಗೆ ಬಂದಿರುವುದರಿಂದ ರಾತ್ರಿ ಸಮಯದಲ್ಲಿ ವಿದ್ಯುತ್ ಕಡಿತವಾಗುತ್ತಿದೆ. ಸಾಧ್ಯವಾದಷ್ಟು ಹಗಲು ಹೊತ್ತಿನಲ್ಲೇ ಅಭ್ಯಾಸ ಮಾಡಿಕೊಳ್ಳಿ. ಮೊಬೈಲ್ ನೋಡುವುದನ್ನು ಕಡಿಮೆ ಮಾಡಿ ಎಂದು ಕಿವಿ ಮಾತು ಹೇಳಿದರು.

ಅತಿಥಿಯಾಗಿದ್ದ ಕೆಪಿಎಸ್ ನ ಉಪಾಧ್ಯಕ್ಷ ಪುರುಷೋತ್ತಮ್ ಮಾತನಾಡಿ, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಹಾಲ್ ಗೆ ಹೋದ ಕೂಡಲೇ ಗಾಬರಿ ಮಾಡಿಕೊಳ್ಳಬಾರದು. ಅರ್ಧವಾರ್ಷಿಕ ಪರೀಕ್ಷೆಯಲ್ಲಿ ಬರೆದಿರುವುದನ್ನು ಮತ್ತೆ ಮನನ ಮಾಡಿಕೊಳ್ಳಬೇಕು. ಈಗಾಗಲೇ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಬಗ್ಗೆ ಸಂಘ ಸಂಸ್ಥೆಗಳು ಸಂಪನ್ಮೂಲ ವ್ಯಕ್ತಿ ಗಳಿಂದ ತರಬೇತಿ ನಡೆಸಿದ್ದಾರೆ. ಅಲ್ಲದೆ ದಿನ ಪತ್ರಿಕೆಗಳಲ್ಲೂ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಇರುವ ಮಾರ್ಗ ಸೂಚಿಗಳನ್ನು ನಿತ್ಯ ಓದಬೇಕು ಎಂದರು.

ಎಸ್.ಡಿ.ಎಂ.ಸಿ. ಸದಸ್ಯ ಉದಯ ಮಾತನಾಡಿ, ಎಸ್.ಎಸ್.ಎಲ್.ಸಿ. ಪರೀಕ್ಷೆ ಸಮೀಪಿಸುತ್ತಿದ್ದಂತೆ ಪೋಷಕರು ಒತ್ತಡ ಹಾಕುತ್ತಾರೆ. ವಿದ್ಯಾರ್ಥಿಗಳು ಬೇಗನೆ ಮಲಗಿ ಬೇಗನೆ ಏಳುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಒಂದು ತಿಂಗಳು ಮುಂಚಿತವಾಗೇ ಪರೀಕ್ಷೆಯಲ್ಲಿ ಬರೆಯುವುದನ್ನು ಗುರುತು ಹಾಕಿಕೊಳ್ಳಬೇಕು ಎಂದರು.

ಇದೇ ಸಂಧರ್ಭದಲ್ಲಿ ವರ್ಗಾವಣೆಗೊಂಡು ಶಿಕ್ಷಕರಾದ ಕಿರಣ, ಮಾಲತಿ, ಶಂಶದಬೇಗಂ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಸಭೆಯಲ್ಲಿ ಎಸ್.ಡಿ.ಎಂ.ಸಿ.ಸದಸ್ಯ ಮೇಘನ,ಸಲೀಂ, ಶಿಕ್ಷಕ ವಿಜು ಇದ್ದರು. ಅತಿಥಿ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಲಾಯಿತು. ವಾಗ್ದೇವಿ ಇದ್ದರು.

Share this article