ಮಾದಕದ್ರವ್ಯ ಮುಕ್ತ ಸಮಾಜದ ಸಂದೇಶ ಸಾರಿದ ವಿದ್ಯಾರ್ಥಿಗಳು

KannadaprabhaNewsNetwork |  
Published : Nov 15, 2026, 02:15 AM IST
ಕುಷ್ಟಗಿ ಪಟ್ಟಣದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ನಡೆಸಿದ ಮ್ಯಾರಾಥಾನ್‌ಗೆ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಮಾದಕದ್ರವ್ಯಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ಕುಷ್ಟಗಿಯ ಬಾಲಕರ ಸರ್ಕಾರಿ ಪ್ರೌಢಶಾಲೆ ಹಾಗೂ ಗವಿಸಿದ್ಧೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ಮ್ಯಾರಥಾನ್ ನಡೆಸಿದರು.

ಕುಷ್ಟಗಿ: ಮಾದಕದ್ರವ್ಯಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ಪಟ್ಟಣದಲ್ಲಿ ವಿದ್ಯಾರ್ಥಿಗಳು ಜಾಗೃತಿಗಾಗಿ ಮ್ಯಾರಥಾನ್ ನಡೆಸಿದರು.

ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾದ ಮ್ಯಾರಥಾನ್ ಮಲ್ಲಯ್ಯ ವೃತ್ತದ ವರೆಗೆ ಸಾಗಿ ಪುನಃ ಬಸವೇಶ್ವರ ವೃತ್ತಕ್ಕೆ ಮರಳಿತು. ಬಾಲಕರ ಸರ್ಕಾರಿ ಪ್ರೌಢಶಾಲೆ ಹಾಗೂ ಗವಿಸಿದ್ಧೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡು ಮಾದಕದ್ರವ್ಯಗಳ ವಿರುದ್ಧ ಘೋಷಣೆ ಕೂಗಿದರು.

ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಶಿಕ್ಷಣ, ಆರೋಗ್ಯ, ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮ್ಯಾರಥಾನ್‌ಗೆ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ ಚಾಲನೆ ನೀಡಿ ಮಾತನಾಡಿ, ಯುವಜನತೆ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗದೆ ಆರೋಗ್ಯಕರ ಜೀವನ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಕುಟುಂಬದವರು ಹಾಗೂ ಸ್ನೇಹಿತರಲ್ಲಿಯೂ ಜಾಗೃತಿ ಮೂಡಿಸಬೇಕು. ವ್ಯಸನಕ್ಕೆ ಒಳಗಾದವರನ್ನು ನಿರ್ಲಕ್ಷಿಸದೆ ಸೂಕ್ತ ಮಾರ್ಗದರ್ಶನ ನೀಡಿ ಮುಖ್ಯವಾಹಿನಿಗೆ ತರಲು ಸಹಕರಿಸಬೇಕು ಎಂದರು.

ಪಿಎಸ್ಐ ಹನುಮಂತಪ್ಪ ತಳವಾರ ಮಾತನಾಡಿ, ಯುವಕರು, ವಿದ್ಯಾರ್ಥಿಗಳು ಸ್ನೇಹಿತರ ಒತ್ತಡ ಅಥವಾ ಕುತೂಹಲಕ್ಕೆ ಮಾದಕ ವಸ್ತುಗಳ ಸೇವನೆಗೆ ಮುಂದಾಗಬಾರದು. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಣೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ವಕೀಲರ ಸಂಘದ ಪ್ರಮುಖರಾದ ಎಚ್.ಆರ್. ನಾಯಕ್, ಶಶಿಧರ್ ಶೆಟ್ಟರ್, ಗ್ರೇಡ್-2 ತಹಸೀಲ್ದಾರ್ ರಜನಿಕಾಂತ್ ಕೆಂಗೇರಿ, ಸಿಡಿಪಿಒ ಯಲ್ಲಮ್ಮ ಹಂಡಿ, ದೈಹಿಕ ಶಿಕ್ಷಣಾಧಿಕಾರಿ ನಾಗಪ್ಪ ಬಿಳಿಯಪನ್ನವರ್, ಯಮುನಪ್ಪ ಚೂರಿ, ಕೆ.ವಿ. ಸ್ಥಾವರಮಠ, ಎಚ್.ಬಿ. ಕುರಿ, ಲತಾ ಸ್ಥಾವರಮಠ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ