ವಿದ್ಯಾರ್ಥಿಗಳು ಆನ್‌ಲೈನ್ ಗೇಮಿಂದ ದೂರವಿರಿ: ಸೈನಾ ನೆಹ್ವಾಲ್

KannadaprabhaNewsNetwork |  
Published : Nov 30, 2026, 02:30 AM IST
ಚಿತ್ರ 29ಬಿಡಿಆರ್50ಎ | Kannada Prabha

ಸಾರಾಂಶ

ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸಂದರ್ಭದಲ್ಲಿ ಆನ್ ಲೈನ್ ಗೇಮ್ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಸಾಧನೆಯ ಗುರಿಯೆಡೆಗೆ ಸಾಗುವ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹವಾಲ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೀದರ್

ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸಂದರ್ಭದಲ್ಲಿ ಆನ್ ಲೈನ್ ಗೇಮ್ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಸಾಧನೆಯ ಗುರಿಯೆಡೆಗೆ ಸಾಗುವ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹವಾಲ್ ತಿಳಿಸಿದರು.

ನಗರದ ನೆಹರೂ ಮೈದಾನದಲ್ಲಿ ಗುರುನಾನಕ ಶಿಕ್ಷಣ ಸಂಸ್ಥೆಯಿಂದ ಆಯೋಜಿಸಿದ ಬೀದರ್ ಮ್ಯಾರಾಥನ್ 2.0 ‘ಶಾಂತಿ ಹಾಗೂ ಮಾನವೀಯತೆಗಾಗಿ ಓಟ’ಕ್ಕೆ ಚಾಲನೆ ನೀಡಿ ಮಾತನಾಡಿ, ಸಾಧನೆ ಮಾಡಬೇಕು ಎನಿಸಿದರೆ ಇಂದೇ ಉತ್ಸಾಹದಿಂದ ಪ್ರಾರಂಭ ಮಾಡಬೇಕು. ನಾಳೆವರೆಗೆ ಕಾಯಬಾರದು. ತನಗಾಗಿ ಎಲ್ಲರೂ ಬದುಕುತ್ತಾರೆ, ಆದರೆ ಸಮಾಜಕ್ಕಾಗಿ, ದೇಶಕ್ಕಾಗಿ ಬದುಕುವವರ ಸಂಖ್ಯೆ ಕಡಿಮೆಯಾಗಿದೆ. ಪುಸ್ತಕ ಮುಚ್ಚುವ ವ್ಯಕ್ತಿಗಳಾಗದೆ ಪುಟಗಳನ್ನು ತೆರೆದು ಓದುವ ಆದರ್ಶ ಸಾಧಕರಾಗಬೇಕು ಎಂದು ಮಕ್ಕಳಿಗೆ ಕರೆಕೊಟ್ಟರು. ಇಂದಿನ ದಿನಗಳಲ್ಲಿ ಪಾಠದ ಜೊತೆಗೆ ಆಟವೂ ಬಹು ಮುಖ್ಯವಾಗಿದೆ. ದಿನವೂ ಆಟ ಆಡಲು ಸಮಯ ಮೀಸಲಿಡಬೇಕು. ಆಟಕ್ಕೆ ಮಹತ್ವ ಕೊಡಿ, ಇದರಲ್ಲಿಯೂ ಸಹ ಸಾಧನೆ ಮಾಡಬಹುದು ಎಂದು ತಿಳಿಸಿದರು.

ಗುರುನಾನಕ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ಇಂದಿನ ಬೀದರ ಮ್ಯಾರಥಾನ್ 2.0 ನಲ್ಲಿ 7500 ಜನರು ನೋಂದಣಿ ಮಾಡಿಸಿ ಕೊಂಡಿದ್ದಾರೆ. ಅತ್ಯಂತ ಉತ್ಸಾಹದಿಂದ ಯಶಸ್ವಿಯಾಗಿ ಪಾಲ್ಗೊಂಡ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ತಾರೆ ಸೈನಾ ನೇಹವಾಲ್ ಅವರು ಬೀದರಗೆ ಬಂದಿದ್ದು ಖುಷಿ ಎನಿಸಿದೆ. ಅವರು ಇತರರಿಗೆ ಮಾದರಿಯಾಗಿದ್ದಾರೆ. ಸ್ವಯಂ ಆತ್ಮವಿಶ್ವಾಸದಿಂದ ಮತ್ತು ಭರವಸೆಯಿಂದ ಸಾಧನೆ ಮಾಡಬೇಕು. ಸಾಧನೆಗೆ ಸಂಕ್ಷಿಪ್ತ ಮಾರ್ಗ ಹುಡುಕದೆ ಸತತ ಪರಿಶ್ರಮ ಮತ್ತು ಸಮಯ ಪಾಲನೆಯಿಂದ ಮುಂದೆ ಬರಬೇಕೆಂದು ಮಕ್ಕಳಿಗೆ ಹುರಿದುಂಬಿಸಿದರು.

21 ಕಿ.ಮೀ, 10 ಕಿ.ಮೀ, 5 ಕಿ.ಮೀ ಮತ್ತು 3 ಕಿ.ಮೀ ಮ್ಯಾರಥಾನ್ 2.0 ಓಟದಲ್ಲಿ ಗಂಡು ಮತ್ತು ಹೆಣ್ಣು ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿಜೇತರಿಗೆ ಮೆಡಲ್, ಟ್ರೋಫಿ, ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ನಾನಕ ಝಿರಾ ಸಾಹೇಬ್ ಫೌಂಡೆಷನ್ ಅಧ್ಯಕ್ಷ ಎಸ್.ಬಲಬೀರ್ ಸಿಂಗ್, ಬೀದರ ಶಾಸಕರಾದ ರಹೀಮ್ ಖಾನ್, ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೆಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಕೆಕೆಆರ್‌ಡಿಬಿಯ ಕಾರ್ಯದರ್ಶಿಗಳಾದ ನಲೀನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಕರ್ನಾಟಕ ರಾಜ್ಯ ಅಕ್ಕ ಪಡೆಯ ಅಡವೈಸರ್ ಶೈನಿ ಪ್ರದೀಪ್ ಗುಂಟಿ, ಸಂಸ್ಥೆಯ ಕಾರ್ಯದರ್ಶಿ ಸರದಾರ ನಾನಕ ಸಿಂಗ್, ಸರದಾರ ಪುನೀತ್ ಸಿಂಗ್ ಮತ್ತು ಪವಿತ್ ಸಿಂಗ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಖಿಲ ಭಾರತ ಫಿಡೆ ರ್‍ಯಾಪಿಡ್ ಚೆಸ್‌, ಚಿರಂತ್‌ ಪ್ರಥಮ
ಸಕ್ಕರೆ ರಿಕವರಿ ವರದಿಯಲ್ಲಿ ರೈತರಿಗೆ ಮೋಸ; ತನಿಖೆಗೆ ಆಗ್ರಹ