-ಶಾಸಕ ರಾಜಾ ವೇಣುಗೋಪಾಲನಾಯಕ ಸಲಹೆ । ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿದ ಆರ್‌ವಿಎನ್
ಕನ್ನಡಪ್ರಭ ವಾರ್ತೆ ಸುರಪುರ
ಯುವಕರು ಡ್ರಗ್ಸ್, ಸಿಗರೇಟ್, ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ದುಶ್ಚಟಗಳಿಂದ ದೂರವಿದ್ದು, ಏಕಾಗ್ರತೆ ಹಾಗೂ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.ನಗರದ ಸಮೀಪದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ''''''''ಬೇಡ ಬ್ರೋ ಡ್ರಗ್ಸ್, ಬೇಕು ಬ್ರೋ ಲೈಫ್'''''''' ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಡ್ರಗ್ಸ್ ಸೇವನೆಯಿಂದ ವ್ಯಕ್ತಿಯಷ್ಟೇ ಅಲ್ಲ, ಕುಟುಂಬ ಹಾಗೂ ಸಮಾಜಕ್ಕೂ ಗಂಭೀರ ಹಾನಿಯಾಗುತ್ತದೆ. ಪೋಷಕರ ಆಶಯಕ್ಕೆ ತಕ್ಕಂತೆ ಶಿಕ್ಷಣದಲ್ಲಿ ಸಾಧನೆ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯಾದ್ಯಂತ ಪೊಲೀಸ್ ಇಲಾಖೆ ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನ ನಡೆಸುತ್ತಿದೆ. ಯಾರಾದರೂ ಡ್ರಗ್ಸ್ ಸೇವಿಸಲು ಒತ್ತಾಯಿಸಿದರೆ ಧೈರ್ಯವಾಗಿ ನಿರಾಕರಿಸಬೇಕು. ಡ್ರಗ್ಸ್ ಸಂಬಂಧಿತ ಮಾಹಿತಿ ದೊರೆತರೆ ಕ್ಯೂಆರ್ ಕೋಡ್, ಪೊಲೀಸ್ ಸಹಾಯವಾಣಿ 112 ಹಾಗೂ ಟೋಲ್‌ಫ್ರೀ 1908 ಮೂಲಕ ಅನಾಮಧೇಯವಾಗಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಡ್ರಗ್ಸ್ ಬೆಳೆಸುವುದು, ತಯಾರಿಸುವುದು, ಸಾಗಾಟ, ಮಾರಾಟ ಹಾಗೂ ಅಕ್ರಮವಾಗಿ ಹೊಂದಿರುವುದು ಎನ್‌ಡಿಪಿಎಸ್ ಕಾಯ್ದೆಯಡಿ ಕಠಿಣ ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಅವರು, ಗಾಂಜಾ, ಕೋಕೇನ್, ಹೆರಾಯಿನ್ ಸೇರಿದಂತೆ ವಿವಿಧ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಪಿಐ ಉಮೇಶ್ ಎಂ. ನಾಯಕ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
------
ಡ್ರಗ್ಸ್‌ಗೆ ''''''''ಬೇಡ'''''''' ಎಂದು ಹೇಳಿ, ಶಿಕ್ಷಣಕ್ಕೆ ''''''''ಹೌದು'''''''' ಎಂದು ಹೇಳಿದಾಗ ಮಾತ್ರ ಉತ್ತಮ ಭವಿಷ್ಯ ಮತ್ತು ಬೆಳಗುವ ಭಾರತ ನಿರ್ಮಾಣ ಸಾಧ್ಯ. "
-ಶಾಸಕ ರಾಜಾ ವೇಣುಗೋಪಾಲನಾಯಕ-----
ಫೋಟೊಸುರಪುರ ಸಮೀಪದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ''''''''ಬೇಡ ಬ್ರೋ ಡ್ರಗ್ಸ್, ಬೇಕು ಬ್ರೋ ಲೈಫ್'''''''' ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಶಾಸಕ ರಾಜಾ ವೇಣುಗೋಪಾಲನಾಯಕ ಉದ್ಘಾಟಿಸಿದರು. ಡಿವೈಎಸ್‌ಪಿ ಜಾವೀದ್ ಇನಾಮದಾರ, ಪಿಐ ಉಮೇಶ್ ಎಂ. ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.
ಜು.28ಸುಆರ್ ಯು -1ಡ್ರಗ್ಸ್‌ಗೆ ''''''''ಬೇಡ ಬ್ರೋ'''''''', ಬೆಳಗುವ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಲಿ: ಶಾಸಕ ರಾಜಾ ವೇಣುಗೋಪಾಲನಾಯಕ