ಹಿರೇಕೆರೂರು: ವಿದ್ಯಾರ್ಥಿಗಳು ಉನ್ನತ ಕನಸಗಳನ್ನು ಕಟ್ಟಿಕೊಂಡು ಪರಿಶ್ರಮದಿಂದ ವ್ಯಾಸಂಗ ಮಾಡಿ ಸಾಧನೆ ಶಿಖರ ಏರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮೇಘರಾಜ ಮಾಳಗಿಮನಿ ಹೇಳಿದರು.
ಭಾರತ ಜ್ಞಾನ ವಿಜ್ಞಾನ ಸಮಿತಿ ನೂತನ ಪದಾಧಿಕಾರಿಗಳ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ ಪುಟ್ಟಪ್ಪಗೌಡ್ರ, ಭಾರತ ಜ್ಞಾನ ವಿಜ್ಞಾನ ಸಮಿತಿಯ ನೂತನ ಪದಾಧಿಕಾರಿಗಳು ಸಮಿತಿಯ ಎಲ್ಲ ಕಾರ್ಯಚಟುವಟಿಯಲ್ಲಿ ಸಕ್ರಿಯವಾಗಿದ್ದುಕೊಂಡು ಅದರ ಉದ್ದೇಶ ಈಡೇರಿಸುವ ಕಾರ್ಯ ಮಾಡಬೇಕು ಎಂದರು.
ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಸಂಚಾಲಕಿ ರೇಣುಕಾ ಗುಡಿಮನಿ ಮಾತನಾಡಿ, ಸಮಿತಿಯಡಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಇಂದಿನ ಯುವ ಪೀಳಿಗೆಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತು, ಬಾಹ್ಯಕಾಶ ವೀಕ್ಷಣೆ, ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸುವಿಕೆ, ಪ್ರತಿ ತಿಂಗಳು ಬಿಡುಗಡೆಯಾಗುವ ಟೀಚರ್ ಪತ್ರಿಕೆಗಳಲ್ಲಿ ವಿದ್ಯಾರ್ಥಿಗಳು ಸ್ವರಚಿತ ಕವನಗಳು, ಕಥೆ ಹೇಳುವುದು, ವಿಜ್ಞಾನಕ್ಕೆ ಸಂಬಂಧಪಟ್ಟ ಪ್ರಯೋಗಗಳನ್ನು ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯ ಮಾಡಲಾಗುತ್ತದೆ ಎಂದರು.ತಾಲೂಕಿನ ವಿವಿಧ ಪ್ರೌಢಶಾಲೆಗಳು 27 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಾಲೂಕು ಕಸಾಪ ಅಧ್ಯಕ್ಷ ಎನ್. ಸುರೇಶಕುಮಾರ ಅಧ್ಯಕ್ಷತೆ ವಹಿಸಿದ್ದರು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಂದ್ರ ಬಡಳ್ಳಿ, ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಚೇರ್‌ಮನ್ ಎಂ.ಬಿ. ಹಾದಿಮನಿ. ರಟ್ಟೀಹಳ್ಳಿ ತಾಲೂಕು ಭಾರತ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಮಹೇಶ ಮೆಣಸಗಿ, ಗೌರವಾಧ್ಯಕ್ಷ ರಾಘವೇಂದ್ರ ಅಗಸಿಬಾಗಿಲ, ರತ್ನಮ್ಮ ಜೋಗಿಹಳ್ಳಿ, ಲಲಿತಾ ಗೊಗ್ಗದ, ಬಿ.ಟಿ. ಚಿಂದಿ, ಬಸವರಾಜ ಪೂಜಾರ, ಪಿ.ಬಿ. ನಿಂಗನಗೌಡ್ರ, ರಾಮಣ್ಣ ತೆಂಬದ, ಚಿಕ್ಕನರಗುಂದಮಠ ಇದ್ದರು.