ಅಮೆರಿಕದ ಮಿಚಿಗನ್ ಪ್ರದೇಶದ ಡೆಟ್ರಾಯಿಟ್ ನಗರಕ್ಕೆ ಒಂದು ತಿಂಗಳ ಖಾಸಗಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಮಯದಲ್ಲಿ ಅಲ್ಲಿಯ ವಿವಿಧ ಸ್ಥಳಗಳಲ್ಲಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುರಿತು ಅಧ್ಯಯನ ಕೈಗೊಳ್ಳುವುದಾಗಿ ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಗದಗ: ಅಮೆರಿಕದ ಮಿಚಿಗನ್ ಪ್ರದೇಶದ ಡೆಟ್ರಾಯಿಟ್ ನಗರಕ್ಕೆ ಒಂದು ತಿಂಗಳ ಖಾಸಗಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಮಯದಲ್ಲಿ ಅಲ್ಲಿಯ ವಿವಿಧ ಸ್ಥಳಗಳಲ್ಲಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುರಿತು ಅಧ್ಯಯನ ಕೈಗೊಳ್ಳುವುದಾಗಿ ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.ಎಸ್.ವಿ. ಸಂಕನೂರ ಅಭಿಮಾನಿ ಬಳಗ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಶಿಕ್ಷಕ ಸಂಘಟನೆಗಳ ವತಿಯಿಂದ ವಿದೇಶ ಪ್ರಯಾಣಕ್ಕೆ ಶುಭ ಹಾರೈಕೆಯ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇಂದು ಭಾರತವು ವಿವಿಧ ಪಾಶ್ಚಾತ್ಯ ದೇಶಗಳ ಸರಿಸಮನಾಗಿ ತೀವ್ರಗತಿಯಿಂದ ಬೆಳವಣಿಗೆ ಹೊಂದುತ್ತಿದೆ. ಭಾರತೀಯ ಸನಾತನ ಮೌಲ್ಯಗಳು ಮತ್ತು ಪರಂಪರೆಯನ್ನು ಅಮೆರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಪರಿಚಯಿಸುವ ಜತೆಗೆ ಅಮೆರಿಕದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಪರ ಅಂಶಗಳನ್ನು ಮತ್ತು ಸಾಧನೆಗಳನ್ನು ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ತಮ್ಮ ಈ ಅಧ್ಯಯನ ಮತ್ತು ಭೇಟಿ ಮಹತ್ವಪೂರ್ಣವಾಗಿದೆ ಎಂದರು.
ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರವಿ ಗುಂಜಿಕರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಡಿ.ಎಸ್. ತಳವಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳಾರಿ, ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಎಂ.ಸಿ. ಕಟ್ಟಿಮನಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಫ್. ಪೂಜಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ಹಿರೇಮಠ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕಿರೇಸೂರ ಮಾತನಾಡಿದರು. ಪಪೂ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಅಂಗಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ತೋಂಟದಾರ್ಯ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಡಾ. ಜಿ.ಬಿ. ಪಾಟೀಲ, ಡಾ. ಉಮೇಶ ಪುರದ, ವಿ.ಬಿ. ದಾವಣಗೆರೆ, ಸಿ. ಲಿಂಗಾರೆಡ್ಡಿ, ಡಾ. ಬಿ.ಎಲ್. ಚವ್ಹಾಣ, ಎಸ್.ಐ. ಮೇಟಿ, ವಿ.ಎಸ್. ದಲಾಲಿ, ಶಶಿಧರ ರೇಶ್ಮಿ, ವಿ.ಬಿ. ಕಾಳೆ, ಮಲ್ಲಾಪುರ, ಜಗದೀಶ ನರಗುಂದ, ದತ್ತಪ್ರಸನ್ನ ಪಾಟೀಲ, ಪ್ರಾಚಾರ್ಯ ರವಿ ಕುಲಕರ್ಣಿ, ಎನ್.ವಿ. ಜೋಷಿ, ಬಿ.ವಿ. ಪಾಟೀಲ, ಪಿ.ಬಿ. ಬಂಡಾ, ಪ್ರಾಚಾರ್ಯ ಬೆಲ್ಲದ, ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.