ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ವಮಾನವ ಸಭಾಭವನದಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಯುಜಿಸಿಯೇತರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಅನುಸಂಧಾನ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಕನ್ನಡ ಶಾಲು, ಕನ್ನಡ ಪುಸ್ತಕ ನೀಡಿ ಅವರು ಮಾತನಾಡಿದರು.
ಸುಮಾರು 400ಕ್ಕೂ ಹೆಚ್ಚು ಹಳಗನ್ನಡ ಕಾವ್ಯಗಳು ಲಭ್ಯವಿದ್ದು, ಕನ್ನಡ ಸಾಹಿತ್ಯ ಲೋಕದಲ್ಲಿ ನಡೆದ ಮಹತ್ವದ ಪ್ರಯೋಗಗಳ ಅರಿವು ಇಂದಿನ ಹೊಸ ತಲೆಮಾರಿಗೆ ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳನ್ನು ಸಾಹಿತ್ಯದ ಪ್ರಸಾರ ಮತ್ತು ಕನ್ನಡದ ಬೆಳವಣಿಗೆಗೆ ಬಳಸಿಕೊಳ್ಳುವ ಮೂಲಕ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಅವರು ಮಾತನಾಡಿ, ಹಳಗನ್ನಡ ಕನ್ನಡಿಗರ ಭಾಷಾ ಅಸ್ಮಿತೆಯ ಪ್ರತೀಕವಾಗಿದೆ. ಇಂದಿನ ಮಕ್ಕಳಿಗೆ ಕನ್ನಡ ಭಾಷೆಯ ಜೊತೆಗೆ ಹಳಗನ್ನಡದ ಅರಿವು ಕೂಡ ಅಗತ್ಯವಾಗಿದ್ದು, ಕುಮಾರವ್ಯಾಸನ ಪದ್ಯವನ್ನು ಹೇಳುವ ಮೂಲಕ ಅದರ ಅಧ್ಯಯನ ನಮ್ಮಿಂದಲೇ ಆರಂಭವಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ನೂತನವಾಗಿ ಆರಂಭಗೊಂಡಿರುವ ಬಾಗಲಕೋಟೆ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.
ಕನ್ನಡ ವಿಷಯದ ಮೌಲ್ಯಮಾಪನ ಕೇಂದ್ರ ಚೇರಮನ್ ಡಾ.ಎ.ಎಂ.ಸತ್ಯನಾಯಕ, ನವನಗರ ಸ.ಪ್ರ.ದ.ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಪರಸಪ್ಪ ತಳವಾರ, ನವನಗರ ಸ.ಪ್ರ.ದ.ಕಾಲೇಜಿನ ಬಾಗಲಕೋಟೆ ವಿಶ್ವವಿದ್ಯಾಲಯ ಮೌಲ್ಯಮಾಪನ ಕೇಂದ್ರ ಸಂಚಾಲಕ ಡಾ.ಸಂಪತ್ತ ಲಮಾಣಿ, ಡಾ.ಬಸವರಾಜ ಬೀಳಗಿ, ಪ್ರಧಾನ ಕಾರ್ಯದರ್ಶಿ ಎಸ್.ಸಿ.ಗದ್ಯಾಳ ವೇದಿಕೆ ಮೇಲೆ ಉಪಸ್ಥಿತರಿದ್ದರು.
-ಡಾ.ವೈ.ಎಂ.ಯಾಕೊಳ್ಳಿ, ಹಿರಿಯ ಸಾಹಿತಿ