ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ಅರಮನೆ ಮಂಡಳಿ ಸಭಾಂಗಣದಲ್ಲಿ ಬುಧವಾರ ನಡೆದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು. ಸ್ತಬ್ಧಚಿತ್ರಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತೆ ಇರಬೇಕು. ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ತಚಿತ್ರ ತಯಾರಿಕೆಗೆ ಮಾಡಬೇಕು ಎಂದರು.
ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆಧುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು. ಶುಂಠಿ ಬೆಳೆಯನ್ನು ಬೆಳೆಯಲು ರೈತರು ಭೂಮಿಯನ್ನು ಗುತ್ತಿಗೆಗೆ ನೀಡುತ್ತಿದ್ದು, ಶುಂಠಿ ಬೆಳೆಯನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗಿ ಮುಂದಿನ ಒಂದೆರಡು ವರ್ಷ ಉತ್ತಮ ಬೆಳೆ ಬರುವುದಿಲ್ಲ. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು. ಜನಪದ ಕಲೆಗಳನ್ನು ಪ್ರದರ್ಶನ ಮಾಡಬೇಕು. ಕಲಾವಿದರಿಗೆ ಪಾರದರ್ಶಕವಾಗಿ ಅವಕಾಶ ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ರಸ್ತೆಗಳ ಗುಂಡಿಗಳ ಮುಚ್ಚುವ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು. ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ್, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಡಿಸಿಪಿಗಳಾದ ಎಂ. ಮುತ್ತುರಾಜು, ಎಸ್. ಜಾಹ್ನವಿ, ಡಿಸಿಎಫ್ ಡಾ.ಕೆ.ಎನ್. ಬಸವರಾಜು ಮೊದಲಾದವರು ಇದ್ದರು.
- ಡಾ.ಎಚ್.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವರು
ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಆನೆಯ ಮಾವುತ ವಸಂತ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
ಅರಣ್ಯ ಇಲಾಖೆಯ ಸಿಬ್ಬಂದಿಗೆ 2022 ಮತ್ತು 2023ನೇ ಸಾಲಿನಲ್ಲಿ ಮುಖ್ಯಮಂತ್ರಿ ಪದಕವು ಮೈಸೂರು ವೃತ್ತದ ವ್ಯಾಪ್ತಿಯ ನಾಲ್ವರಿಗೆ ಲಭಿಸಿದೆ.ಉಪ ವಲಯ ಅರಣ್ಯಾಧಿಕಾರಿಗಳಾದ ಎನ್. ಶ್ರೀನಿವಾಸ್, ಎಸ್.ಎಂ. ಮಂಜುನಾಥ್, ಗಸ್ತು ಅರಣ್ಯಪಾಲಕ ಎ.ಎಂ. ಮಂಜುನಾಥ್ ಮತ್ತು ಅಂಬಾರಿ ಆನೆ ಅಭಿಮನ್ಯು ಮಾವುತ ಜೆ.ಎಸ್. ವಸಂತ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರುವುಗೊಳಿಸುವುದು ಸೇರಿದಂತೆ ಗಣನೀಯ ಸಾಧನೆ ಮಾಡಿದ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕವನ್ನು ನೀಡಲಾಗುತ್ತದೆ.