ಶೂಟೌಟ್ ಸ್ಥಳ ಪರಿಶೀಲಿಸಿದ ಉಪ ವಿಭಾಗಧಿಕಾರಿ: ವರದಿ ಸಲ್ಲಿಕೆಗೆ 7 ದಿನ ಅವಕಾಶ

KannadaprabhaNewsNetwork |  
Published : Aug 17, 2026, 01:45 AM IST
ಶೂಟೌಟ್ ಸ್ಥಳ ಪರಿಶೀಲಿಸಿದ ಉಪ ವಿಭಾಗಧಿಕಾರಿ: ವರದಿ ಸಲ್ಲಿಕೆಗೆ 7 ದಿನ ಅವಕಾಶ .... | Kannada Prabha

ಸಾರಾಂಶ

ನಿಗದಿತ ಅವಧಿಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಾಗುತ್ತದೆ.‌ ಈಗಾಗಲೇ ತನಿಖೆ ಆರಂಭವಾಗಿದೆ, ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದೇನೆ.‌

ಹನೂರು: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದು, ತನಿಖಾ ವರದಿಗೆ ಸಲ್ಲಿಕೆಗೆ 7 ದಿನ ಅವಕಾಶ ನೀಡಿದ್ದಾರೆ ಎಂದು ಕೊಳ್ಳೇಗಾಲ ಉಪ ವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ ತಿಳಿಸಿದರು. ಸುದ್ದಿಗಾರರೊಂದಿಗೆ ಅವರು‌ ಮಾತನಾಡಿ, ನಿಗದಿತ ಅವಧಿಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಾಗುತ್ತದೆ.‌ ಈಗಾಗಲೇ ತನಿಖೆ ಆರಂಭವಾಗಿದೆ, ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದೇನೆ.‌ ಗುಂಡೇಟಿಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಂಪೂರ್ಣ ತನಿಖಾ ವರದಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿ
ಏತ ನೀರಾವರಿಗೆ ಶಾಸಕ ಮಂಜು ಚಾಲನೆ