ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಜ್ಯದಲ್ಲಿ ಇ-ಖಾತಾ ಗೊಂದಲ ಬಗೆ ಹರಿಯುವ ಮೊದಲೇ ಆಸ್ತಿ ನೋಂದಣಿಗೆ ಕಾಯುತ್ತಿದ್ದ ಆಸ್ತಿ ಮಾರಾಟಗಾರರು ಮತ್ತು ಕೊಳ್ಳುವವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಏಕಾಏಕಿ ಜಿಲ್ಲೆಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲಾ ರೀತಿಯ ದಸ್ತಾವೇಜುಗಳ ನೋಂದಣಿ ಸಗಿತಗೊಳಿಸಲಾಗಿದೆ.ರಾಜ್ಯದಲ್ಲಿ ನೋಂದಣಿ ಕಾಯ್ದೆಗೆತಿದ್ದುಪಡಿ ತರಲಾಗಿದೆ. ನಕಲಿ ದಾಖಲೆಗಳ ನೋಂದಣಿ ಮಾಡಿದರೆ ಸಬ್ ರಿಜಿಸ್ಟ್ರಾರ್‌ಗಳಿಗೆ ಶಿಕ್ಷೆ ವಿಧಿಸಲು ತಿದ್ದುಪಡಿ ಅಕಾಶ ಕಲ್ಪಿಸಿದ್ದು ಇದಕ್ಕೆ ಸಬ್‌ರಿಜಿಸ್ಟ್ರಾರ್‌ಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.
ನೋಂದಣಿ ಪ್ರಕ್ರಿಯೆ ಮುಂದೂಡಿಕೆಹೊಸ ಸೆಕ್ಷನ್ ಪರಿಚಯಿಸಿರುವುದರಿಂದ ಕೇಂದ್ರ ಕಚೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆ, ನೋಂದಣಿಯನ್ನು ಅನಿರ್ದಿಷ್ಟ ಅವಧಿಗೆ ಮುಂಡೂಡಲಾಗಿದೆ. ಶನಿವಾರ ಮತ್ತು ಅದಕ್ಕೂ ಮುಂಚೆ ಅರ್ಜಿ ಸಲ್ಲಿಸಿರುವ ಪ್ರಕರಣಗಳಲ್ಲಿ ಮಾತ್ರ ಸೋಮವಾರ ಮತ್ತು ಮಂಗಳವಾರ ನೋಂದಣಿಯಾಗಿವೆ. ಸರ್ಕಾರದಿಂದ ಸಷ್ಟನೆ ಬರುವವರೆಗೂ ನೋಂದಣಿ ಮಾಡದಿರಲು ಉಪನೋಂದಣಾಧಿಕಾರಿಗಳು ನಿರ್ಧರಿಸಿದ್ದಾರೆ.
22-ಸಿ ಪ್ರಕಾರ ಜಿಲ್ಲಾ ನೋಂದಣಾಧಿಕಾರಿಗೆ ಸ್ವಯಂ ಪ್ರೇರಣೆಯಿಂದಾಗಲಿ ಅಥವಾ ವ್ಯಕ್ತಿಯಿಂದ ಪಡೆದ ದೂರಿನ ಮೇಲಾಗಲಿ 22-ಬಿ ಪ್ರಕರಣ ವನ್ನು ಉಲ್ಲಂಘಿಸಿ ದಸ್ತಾ ವೇಜು ನೋಂದಣಿ ಮಾಡಲಾಗಿದೆ ಎಂದು ಗೊತ್ತಾದರೆ ನೋಟಿಸ್ ನೀಡಿ ಸ್ಪಷ್ಟ ಉತ್ತರ ಬಾರದಿದ್ದರೆ ನೋಂದಣಿ ರದ್ದುಪಡಿಸುವ ಅಧಿಕಾರ ನೀಡಲಾಗಿದೆ.ಕಾಯ್ದೆ ಜಾರಿ ಮಾಡುವ ಮೊದಲು ಯಾವ್ಯಾವ ದಾಖಲೆ ಪರಿಶೀಲನೆಗೆ ಯಾವ್ಯಾವ ನಿಯ ಮಾವಳಿ ಪಾಲಿಸಬೇಕು ಎಂಬ ಬಗ್ಗೆ ಸರ್ಕಾರ ಸ್ಪಷ್ಟತೆ ನೀಡಿಲ್ಲ. ಏಕಾಏಕಿ ನಮ್ಮನ್ನು ಹೊಣೆ ಮಾಡುವ ಕಾಯ್ದೆ ಜಾರಿಗೊಳಿಸಿದೆ. ತಮಿಳುನಾಡು ಕಾಯಿದೆಯನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ತಿಳಿಯುವುದ ಹೇಗೆ?
ಪಿಟಿಸಿಎಲ್ ಕಾಯಿದೆಯಡಿ ಬರುವ ಆಸ್ತಿ, ಅಕ್ರಮ ಮಂಜೂರಾತಿ ಆಗಿರುವ ಸರ್ಕಾರಿ ಜಾಗ ನೋಂದಣಿ ಮಾಡುವಂತಿಲ್ಲ, ಅಕ್ರಮ ಮಂಜೂರಾತಿ ಎಂಬುದು ಉಪ ನೋಂದಣಾಧಿಕಾರಿ ಕಚೇರಿಗೆ ಹೇಗೆ ತಿಳಿಯುತ್ತದೆ ಎಂದು ಪ್ರಶ್ನಿಸಿ, ಇದೆಲ್ಲಾ ಗೊಂದಲಗಳನ್ನು ಪರಿಹರಿಸಿದರೆ ಮಾತ್ರ ನಾವು ಕೆಲಸ ನಿರ್ವಹಿಸ ಬಹುದು ಎಂದು ತಿಳಿಸಿದರು. ಪ್ರತಿ ನಿತ್ಯ 40ರಿಂದ 50 ನೊಂದಣಿಗಳು ಆಗುತ್ತಿದ್ದ ಸಬ್ ರಿಜಿಸ್ಟ್ರಾರ್ ಕಚೇರಿ ಇಂದು ಜನರಿಲ್ಲದೇ ಭಣಗುಡುತ್ತಿತ್ತು.