ಕನ್ನಡಪ್ರಭ ವಾರ್ತೆ ಜಮಖಂಡಿ ನಿವೃತ್ತ ನೌಕರರ ಪಿಂಚಣಿ ಹಾಗೂ ನಿವೃತ್ತಿ ಸೌಲಭ್ಯಗಳ ಕಡತ ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಖಜಾನೆ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಾಲೂಕು ಖಜಾನಾಧಿಕಾರಿ ಎಸ್.ಎಸ್. ಬಿರಾದಾರ ಹಾಗೂ ಸಿಬ್ಬಂದಿ ವಿನಾಯಕ ಹೋನವಾಡ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಜಮಖಂಡಿ
ನಿವೃತ್ತ ನೌಕರರ ಪಿಂಚಣಿ ಹಾಗೂ ನಿವೃತ್ತಿ ಸೌಲಭ್ಯಗಳ ಕಡತ ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಖಜಾನೆ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಾಲೂಕು ಖಜಾನಾಧಿಕಾರಿ ಎಸ್.ಎಸ್. ಬಿರಾದಾರ ಹಾಗೂ ಸಿಬ್ಬಂದಿ ವಿನಾಯಕ ಹೋನವಾಡ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಚೇತನ ತರತರಿ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ಅವರ ಮಾವನ ನಿವೃತ್ತಿಯ ನಂತರ ದೊರೆಯಬೇಕಾದ ಪಿಂಚಣಿ ಹಾಗೂ ನಿವೃತ್ತಿ ಸೌಲಭ್ಯಗಳನ್ನು ಮಂಜೂರು ಮಾಡಲು ಮೊದಲಿಗೆ 70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ 40 ಸಾವಿರಕ್ಕೆ ಒಪ್ಪಂದ ಮಾಡಿಕೊಂಡಿದ್ದರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಫಿರ್ಯಾದಿದಾರರಿಂದ 40 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿಎಸ್‌ಪಿ ಸುರೇಶ ರೆಡ್ಡಿ, ಸಿಪಿಐ ವಿ.ಎನ್.ಕಡಿ, ಪಿಎಸ್‌ಐ ಎಂ.ಬಿ.ಬಿರಾದಾರ ಮತ್ತು ಎನ್.ಆರ್,ಖಿಲಾರೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.