ಸುಭಾಶ್ ಶೆಟ್ಟಿ ಹತ್ಯೆ: ಪೊಲೀಸ್‌ ವಿರುದ್ಧ ಕಾರ್ಯಕರ್ತರ ಆಕ್ರೋಶ

KannadaprabhaNewsNetwork |  
Published : May 02, 2025, 11:45 PM IST
32 | Kannada Prabha

ಸಾರಾಂಶ

ಕೊಲೆಗೀಡಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿಯ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ನೀಡದ ಪೊಲೀಸರ ಕ್ರಮಕ್ಕೆ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಜಮಾಯಿಸಿದ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರುಕೊಲೆಗೀಡಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿಯ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ನೀಡದ ಪೊಲೀಸರ ಕ್ರಮಕ್ಕೆ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಜಮಾಯಿಸಿದ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಸುಹಾಸ್ ಶೆಟ್ಟಿಗೆ ಈ ಹಿಂದೆಯೇ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸುಹಾಸ್‌ ಶೆಟ್ಟಿ ರೌಡಿಶೀಟರ್ ಆಗಿದ್ದರೂ ಆತ ಹಿಂದೂ ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕದಲ್ಲಿ ಇರುತ್ತಿದ್ದ, ಹೀಗಾಗಿ ಕಾರ್ಯಕರ್ತರ ದಂಡೇ ಆಸ್ಪತ್ರೆಯಲ್ಲಿ ನೆರೆದಿತ್ತು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಸ್ಪತ್ರೆಗೆ ಆಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸುವ ಪ್ರಯತ್ನ ನಡೆಸಿದರು. ಅಂತಿಮ ಸಂಸ್ಕಾರ ಎಲ್ಲಿ?ಸುಹಾಸ್ ಶೆಟ್ಟಿಯ ಅಂತಿಮ ಸಂಸ್ಕಾರ ಅವರ ಬೆಳ್ತಂಗಡಿ ಅಥವಾ ಸುರತ್ಕಲ್ ಮನೆಯಲ್ಲಿ ನಡೆಸುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ 11 ಬಾರಿ ಇರಿದು ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಶಾಸಕ ಆರೋಪ: ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಇಂದು ಮಂಗಳೂರು ದಕ್ಷಿಣ ಶಾಸಕ ವೇದವಾಸ್ ಕಾಮತ್ ಆರೋಪಿಸಿದ್ದಾರೆ.ಎಸ್.ಡಿಪಿ.ಐ, ಪಿ.ಎಫ್.ಐ ನಂತಹ ಮತಾಂಧ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದ್ದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ.ಕೂಡಲೇ ಪೊಲೀಸ್ ಇಲಾಖೆ ಹಂತಕರ ಹೆಡೆಮುರಿ ಕಾನೂನಿನ ಬಲೆಯೊಳಗೆ ತಂದು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌