ತುಮುಲ್ ನೇರ ನೇಮಕಾತಿ ಪ್ರಕ್ರಿಯೆ ತನಿಖೆಗೆ ಒಳಪಡಿಸಿ: ನೊಂದ ಅಭ್ಯರ್ಥಿಗಳ ಒತ್ತಾಯ

KannadaprabhaNewsNetwork |  
Published : Oct 23, 2026, 01:15 AM IST
್ಿ್ಿ | Kannada Prabha

ಸಾರಾಂಶ

ಕೆಲ ಅಭ್ಯರ್ಥಿಗಳು ಸಂದರ್ಶನಕ್ಕೆ ಬರದಿದ್ದರೂ ಅವರಿಗೆ ಅಂಕಗಳನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು. ನಕಲಿ ದಾಖಲೆಗಳ ಬಳಕೆ ಆರೋಪಗಳನ್ನೂ ಪರಿಶೀಲಿಸಿ, ತಪ್ಪುದೃಢಪಟ್ಟರೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೊಂದ ಅಭ್ಯರ್ಥಿಗಳಾದ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ತುಮುಲ್)ದಲ್ಲಿ 2016–17ನೇ ಸಾಲಿನಲ್ಲಿ ನಡೆಸಿದ ನೇರ ನೇಮಕಾತಿ ಪ್ರಕ್ರಿಯೆಯನ್ನೇ ತನಿಖೆಗೆ ಒಳಪಡಿಸಬೇಕು ಎಂದು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಅರುಣ್‌ಕುಮಾರ್, ವೆಂಕಟೇಶ್, ಶಾಂತಲಾ, ಶಾಂತರಾಜು, ರೇಣುಕಯ್ಯ, ಪುಟ್ಟರಾಜು, ರಜತ್ ಹಾಗೂ ಮಂಜುನಾಥ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿ ಹೆಚ್ಚು ಅಂಕ ಪಡೆದಿರುವ ಅಭ್ಯರ್ಥಿಗಳನ್ನು ಬಿಟ್ಟು, ಕಡಿಮೆ ಅಂಕ ಪಡೆದಿರುವ ಕೆಲವರಿಗೆ ಉದ್ಯೋಗ ನೀಡಲಾಗಿದೆ. 102 ಅಂಕಗಳನ್ನು ಪಡೆದ ಅಭ್ಯರ್ಥಿ ಬಿಟ್ಟು 77 ಅಂಕ ಪಡೆದಿದ್ದ ಅಭ್ಯರ್ಥಿಗೆ ಉದ್ಯೋಗ ನೀಡಲಾಗಿದೆ ಎಂದರು.

ಕೆಲ ಅಭ್ಯರ್ಥಿಗಳು ಸಂದರ್ಶನಕ್ಕೆ ಬರದಿದ್ದರೂ ಅವರಿಗೆ ಅಂಕಗಳನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು. ನಕಲಿ ದಾಖಲೆಗಳ ಬಳಕೆ ಆರೋಪಗಳನ್ನೂ ಪರಿಶೀಲಿಸಿ, ತಪ್ಪುದೃಢಪಟ್ಟರೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೊಂದ ಅಭ್ಯರ್ಥಿಗಳಾದ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

ಮಾಜಿ ಸೈನಿಕರು, ಮಹಿಳೆಯರು ಹಾಗೂ ಇತರ ಮೀಸಲಾತಿ ವರ್ಗಗಳಿಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿದೆಯೇ ಎಂಬುದನ್ನೂ ಪರಿಶೀಲಿಸಬೇಕು. ಮೀಸಲಾತಿ ಹುದ್ದೆಗಳನ್ನು ಇತರ ವರ್ಗದ ಅಭ್ಯರ್ಥಿಗಳಿಗೆ ನೀಡಿದ್ದರೆ, ಅದಕ್ಕೆ ಸಮರ್ಥ ಪ್ರಾಧಿಕಾರದ ಅನುಮತಿ ಇದೆಯೇ ಮತ್ತು ರೋಸ್ಟರ್ ಹಾಗೂ ಮೆರಿಟ್ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ದಾಖಲೆಗಳ ಆಧಾರದಲ್ಲಿ ಪರಿಶೀಲಿಸಬೇಕೆಂದು ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೈಸೂರು ದಸರಾದಲ್ಲಿ ಸ್ತ್ರೀ ಶಕ್ತಿಗೆ ಭಾರೀ ಮೆಚ್ಚುಗೆ
ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಭೂಮಿ ಕೊಡಲು ವಿಳಂಬ