ವೈದ್ಯರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಕೆ

KannadaprabhaNewsNetwork |  
Published : Oct 04, 2026, 01:30 AM IST
ಚಿತ್ರ 3ಬಿಡಿಆರ್56 | Kannada Prabha

ಸಾರಾಂಶ

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ತಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಮುಖ್ಯವೈದ್ಯಾಧಿಕಾರಿ ಡಾ.ಜಾನಿ ಬಾಕರ್ ನೇತೃತ್ವದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹುಮನಾಬಾದ್

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ತಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಮುಖ್ಯವೈದ್ಯಾಧಿಕಾರಿ ಡಾ.ಜಾನಿ ಬಾಕರ್ ನೇತೃತ್ವದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ಜಾನಿ ಬಾಕರ್ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನನಿತ್ಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತಡದಲ್ಲಿ ಕೆಲಸ ಮಾಡುವಂತಹ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ನಮ್ಮೆಲ್ಲರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ರಾಜಶೇಖರ ಪಾಟೀಲ್ ಮಾತನಾಡಿ, ರೋಗಿಗಳ ನಿರೀಕ್ಷೆಯಂತೆ ಸಾರ್ವಜನಿಕ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡ ಬೇಕು. ಆಸ್ಪತ್ರೆಯ ಸಿಬ್ಬಂದಿ ಸಮಸ್ಯೆ ಮತ್ತು ಬೇಡಿಕೆಗಳು ಏನೇ ಇದ್ದರೂ ಎಲ್ಲವೂ ಆರೋಗ್ಯ ಇಲಾಖೆ ಸಚಿವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿ, ವಿಶೇಷ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಡಾ.ರೋಹಿತ ರಘೋಜಿ, ಡಾ.ಡಾ.ವಿಜಯಸಾಗರ ಮಲಶಟ್ಟಿ, ಡಾ.ಮುಸ್ತಾಫಾ, ಡಾ.ಶೈಲಜಾ ರಘೋಜಿ, ಡಾ.ಸುರೇಖಾ ನಿರೀಕ್ಷಣಾಧಿಕಾರಿ ಶಿವಕುಮಾರ ಕಿವಡೆ, ರೋಹನ, ಶರಣಬಸಪ್ಪ, ಸುರೇಶ, ಸುಗಂಧಾ, ಶೈಲಶ್ರೀ, ಜಗದೇವಿ, ಪ್ರಿಯದರ್ಶಿ, ನಿರ್ಮಲಾ, ಶೃತಿ ಸೇರಿ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚುನಾವಣಾ ಆಯೋಗದಿಂದ ಮತ ಕಳ್ಳತನ: ಸಚಿವ ಪುಟ್ಟರಂಗಶೆಟ್ಟಿ
ಸಂಗೀತ, ನೃತ್ಯದಿಂದ ಒತ್ತಡ ಕಡಿಮೆ: ದಿನೇಶ್ ಗೂಳಿಗೌಡ