- ಜಿಲ್ಲೆಯಲ್ಲಿ 2 ಶಿಕ್ಷಕರ ಕ್ಷೇತ್ರ, 1 ಪದವೀಧರ ಕ್ಷೇತ್ರ - - - - - -
- ಮೇ 16 ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ
- ಮೇ 17ರಂದು ನಾಮಪತ್ರಗಳ ಪರಿಶೀಲನೆ- ಮೇ 20ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆ ದಿನ
- ಜೂನ್ 6ರಂದು ಮತ ಎಣಿಕೆ
ಜೂನ್ 21ರಂದು ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯ ಆಗುವುದರಿಂದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಮೇ 16 ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಮೇ 17ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6ರಂದು ನಡೆಯಲಿದ್ದು ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ವಿಧಾನ ಪರಿಷತ್ತು ಚುನಾವಣಾ ವೇಳಾಪಟ್ಟಿ ಪ್ರಕಟ ಆಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ.
ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕುಗಳು ಸೇರಲಿವೆ.
ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಈ ಕ್ಷೇತ್ರದಲ್ಲಿ ಬರಲಿವೆ.
- - - -8ಕೆಡಿವಿಜಿ32ಃ: ಡಾ. ಎಂ.ವಿ.ವೆಂಕಟೇಶ್