)
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಾಂಗ್ಲಾ ಅಕ್ರಮ ವಲಸಿಗರಿಗೆ ಸಂಬಂಧಿಸಿ ಹೋರಾಟ ಮಾಡಿದ ಸಂಬಂಧ ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಪುನೀತ್ ಕೆರೆಹಳ್ಳಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಪುನೀತ್ ಕೆರೆಹಳ್ಳಿ ವಿರುದ್ಧದ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.
ಇದಕ್ಕೂ ಮುನ್ನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಎಫ್‌ಆರ್‌ಆರ್‌ಒನಲ್ಲಿ ನೋಂದಣಿ ಮಾಡಿಸದ ಜನರನ್ನು ಪತ್ತೆ ಮಾಡುವುದು ರಾಜ್ಯ ಸರ್ಕಾರದ ಕೆಲಸ. ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಪುನೀತ್ ತೋರಿಸಿದ್ದಾರೆ. ಅದಕ್ಕೆ ನೀವು ಅವರ ವಿರುದ್ಧ ಪ್ರಕರಣ ದಾಖಲಿಸಿದರೆ ಹೇಗೆ? ವಿದೇಶದಿಂದ ಬಂದಿರುವವರು ಬೆಂಗಳೂರಿನ ಎಲ್ಲ ಕಡೆ ನೆಲೆಸಿದ್ದಾರೆ. ಯಾರ ಬಳಿಯೂ ವೀಸಾ, ಪರ್ಮಿಟ್ ಇಲ್ಲ. ಅದಾಗ್ಯೂ ಅವರು ಇಲ್ಲಿ ನೆಲೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪುನೀತ್ ಅದನ್ನು ತೋರಿಸಿದ್ದಕ್ಕೆ ನಿಮಗೆ ಸಮಸ್ಯೆಯೇ? ಎಂದು ಸರ್ಕಾರಕ್ಕೆ ಚಾಟಿ ಬೀಸಿತು.ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಉತ್ತರಿಸಿ, ಪುನೀತ್ ದಾಖಲೆ ತೋರಿಸಲಿ. ಆದರೆ, ಅಕ್ರಮ ವಲಸಿಗರನ್ನು ಗುರುತಿಸಲು ವಿಧಾನವಿದೆ. ಪುನೀತ್ ನೇರವಾಗಿ ಅಲ್ಲಿಗೆ ಹೋಗಿ ಹಲ್ಲೆ ನಡೆಸಲಾಗದು. ಅಕ್ರಮ ವಲಸಿಗರನ್ನು ಬಂಧನದಲ್ಲಿಡಲಾಗಿದೆ. ದೇಶದಿಂದ ಹೊರಗೆ ಕಳುಹಿಸುವುದರ ಕುರಿತು ಎಫ್‌ಆರ್‌ಆರ್‌ಒ ಕ್ರಮಕೈಗೊಳ್ಳಬೇಕು. ಬಾಂಗ್ಲಾದೇಶದ ವಲಸಿಗರ ಕುರಿತು ಎಫ್‌ಆರ್‌ಆರ್‌ಒಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿತು.