ಇದು ಬಾಟಂ.. ಬರ ಸಮೀಕ್ಷೆ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ ಪಾಟೀಲ್‌ ಸೂಚನೆ

KannadaprabhaNewsNetwork |  
Published : Aug 06, 2026, 01:15 AM IST
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. | Kannada Prabha

ಸಾರಾಂಶ

As per the Chief Minister's directive, drought conditions are being assessed across various districts of the state; as part of this process, Dr. Sharanaprakash Patil—Minister for Medical Education, Skill Development, and Yadgir District In-charge—held a progress review meeting with officials from various departments at the Zilla Panchayat hall on Wednesday

-ಸ್ಮಾಲ್‌

ಸಭೆ

---

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

------

ಕನ್ನಡಪ್ರಭ ವಾರ್ತೆ ಯಾದಗಿರಿ

ಮುಖ್ಯಮಂತ್ರಿ ಸೂಚನೆಯಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ಪರಿಶೀಲನೆ ನಡೆಯುತ್ತಿದ್ದು, ಅದರ ಭಾಗವಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾದಗಿರಿ ಹಾಗೂ ಗುರುಮಠಕಲ್ ತಾಲ್ಲೂಕಿನ ಬರಪೀಡಿತ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಇತ್ತೀಚೆಗೆ ಮಳೆಯಾಗಿದ್ದರೂ, ಮಧ್ಯಂತರ ಒಣಹವೆಯಿಂದ ಉದ್ದು ಹಾಗೂ ಹೆಸರು ಸೇರಿದಂತೆ ಹಲವು ಬೆಳೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಬೆಳೆ ಹಾನಿ (ಮಿಡ್ ಸೀಸನ್ ಅಡ್ವರ್ಸಿಟಿ) ಘೋಷಿಸಲಾಗಿದ್ದು, ರೈತರಿಗೆ ಪರಿಹಾರ ದೊರೆಯುವಂತೆ ಅಗತ್ಯ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸುಮಾರು 70 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದು, ಅರ್ಹ ರೈತರಿಗೆ ಶೀಘ್ರ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಎಫ್‌ಐಆರ್ ಸೂಚನೆ: ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಸಲ್ಫರ್ ಡೈಆಕ್ಸೈಡ್ ಅನಿಲ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕೈಗಾರಿಕಾ ಇಲಾಖೆಯಿಂದ ಸಮಗ್ರ ವರದಿ ಕೋರಲಾಗಿದೆ ಎಂದು ಹೇಳಿದರು. ತನಿಖೆಯಲ್ಲಿ ಸುರಕ್ಷತಾ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದು, ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿರುವ ಎಲ್ಲಾ ಔಷಧ ಮತ್ತು ರಾಸಾಯನಿಕ ಕಾರ್ಖಾನೆಗಳಲ್ಲಿ ಮಾಲಿನ್ಯ ನಿಯಂತ್ರಣ ಹಾಗೂ ಕಾರ್ಮಿಕರ ಸುರಕ್ಷತಾ ಕ್ರಮಗಳ ಅನುಷ್ಠಾನವನ್ನು ತಜ್ಞರ ತಂಡದಿಂದ ಪರಿಶೀಲಿಸಲಾಗುವುದು ಎಂದು ಹೇಳಿದರು.

ಸುಧಾರಣೆಗೆ ಕ್ರಮ: ಕಡೇಚೂರಿನ ಜಿಟಿಟಿಸಿ ಕಾಲೇಜು ಮತ್ತು ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಮಾಲಿನ್ಯ ಹಾಗೂ ದುರ್ವಾಸನೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಕಾಲೇಜನ್ನು ಸ್ಥಳಾಂತರಿಸುವ ಬದಲು ಅಲ್ಲಿಯೇ ಆರೋಗ್ಯಕರ ವಾತಾವರಣ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

* ಅಸಮಾಧಾನ ಸಹಜ: ಸಚಿವ ಸಂಪುಟ ವಿಸ್ತರಣೆ ಹಾಗೂ ಕಾಂಗ್ರೆಸ್ ಪಕ್ಷದ ಕೆಲ ಶಾಸಕರ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಕಾಂಗ್ರೆಸ್ ಒಂದು ಕುಟುಂಬದಂತಿರುವ ಪಕ್ಷ. ಹಿರಿಯ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗುವುದು ಸಹಜ. ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಎಲ್ಲರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ " ಎಂದು ಹೇಳಿದರು.

-

5ವೈಡಿಆರ್19 : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀವ್ರ ಬರ: ಪರಿಹಾರ ಕ್ರಮಕ್ಕೆ ಸಚಿವ ಬಿ.ಎಸ್.ಸುರೇಶ ಸೂಚನೆ
ದಾಂಪತ್ಯದಲ್ಲಿ ವಿಶ್ವಾಸ ವಿಟ್ಟಲ್ಲಿ ಆನಂದ ಪ್ರಾಪ್ತಿ