ಒಳಮೀಸಲಾತಿ ವರದಿ ತ್ವರಿತವಾಗಿ ಸರ್ಕಾರಕ್ಕೆ ಸಲ್ಲಿಸಿ

KannadaprabhaNewsNetwork |  
Published : Jun 25, 2025, 01:18 AM IST
24ಸಿಎಚ್‌ಎನ್‌53ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಜಿಲ್ಲಾ ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟ ಮತ್ತು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು. | Kannada Prabha

ಸಾರಾಂಶ

ಚಾಮರಾಜನಗರದಲ್ಲಿ ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟ ಮತ್ತು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಒಳಮೀಸಲಾತಿ ಸಮೀಕ್ಷಾ ವರದಿಯನ್ನು ಆಯೋಗವು ತ್ವರಿತವಾಗಿ ಸರ್ಕಾರಕ್ಕೆ ಸಲ್ಲಿಸಿ ತಕ್ಷಣವೇ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟ ಅಧ್ಯಕ್ಷ ಎಂ.ಶಿವಮೂರ್ತಿ ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ನಡೆದ ಹೋರಾಟವನ್ನು ಪರಿಗಣಿಸಿ ಸರ್ವೋಚ್ಚ ನ್ಯಾಯಾಲಯ 2024 ಆ.1ರಂದು ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ತೀರ್ಪು ನೀಡಿತ್ತು. ಅಲ್ಲದೆ ಸೂಕ್ತ ದತ್ತಾಂಶಗಳ ಸಹಾಯದಿಂದ ಒಳಮೀಸಲಾತಿಯನ್ನು ಜಾರಿ ಮಾಡುವಂತೆಯೂ ತೀರ್ಪಿನಲ್ಲಿ ಉಲ್ಲೇಖಿಸಿತ್ತು ಎಂದರು.ಕರ್ನಾಟಕದಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗಳ ಜನಸಂಖ್ಯೆಯನ್ನು ಅಧ್ಯಯನ ಮಾಡಲು ನೇಮಿಸಿದ್ದ ಎ.ಜೆ.ಸದಾಶಿವ ಆಯೋಗದ ವರದಿಯಲ್ಲಿ ಸರಿಯಾದ ವೈಜ್ಞಾನಿಕ ದತ್ತಾಂಶಗಳು ಇಲ್ಲದ ಕಾರಣ ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್‌ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಆದೇಶಿಸಿತ್ತು. ಅದರಂತೆ ನ.13 ರಂದು ಸರ್ಕಾರ ಸಚಿವ ಸಂಪುಟದ ಸಭೆಯು ನ್ಯಾಯಾಮೂರ್ತಿ ನಾಗಮೋಹನದಾಸ್ ಏಕ ಸದಸ್ಯ ಆಯೋಗವನ್ನು ನೇಮಿಸಿ 2 ತಿಂಗಳ ಕಾಲಾವಕಾಶ ನೀಡಿತ್ತು. ಸದರಿ, ಆಯೋಗವು 2025 ಮೇ 5 ರಂದು ಹೊಸ ತಂತ್ರಾಜ್ಞಾನ ಸಹಾಯದಿಂದ ಜಿಪಿಎಸ್ ಬಳಸಿ ವೈಜ್ಞಾನಿಕವಾಗಿ ಕೆಲಸ ಆರಂಭಿಸಿ ಈಗಾಗಲೇ 3 ಬಾರಿ ಅವಧಿಯನ್ನು ವಿಸ್ತರಣೆ ಮಾಡಿದೆ. ವೈಜ್ಞಾನಿಕವಾಗಿ ಸಮೀಕ್ಷೆ ಪೂರ್ಣಗೊಳಿಸಿದ ನ್ಯಾಯಾಮೂರ್ತಿ ನಾಗಮೋಹನದಾಸ್ ಅವರಿಗೆ ಪರಿಶಿಷ್ಟ ಜಾತಿಯ ಜನರು ಆಭಾರಿಯಾಗಿದ್ದೇವೆ ಎಂದರು.2011ರ ಜನಗಣಿತಿಯ ಆಧಾರದಲ್ಲಿ ಆಯಾಯಾ ಜಿಲ್ಲೆಗಳಲ್ಲಿ ಜನಗಣಿತಿಯನ್ನು ನಡೆಸಿದೆ. ಸಮೀಕ್ಷೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ನೂರರಷ್ಟು ಮಾಹಿತಿಯನ್ನು ಒದಗಿಸಿದ್ದಾರೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ನೂರರಷ್ಟು ಸಮೀಕ್ಷೆಯನ್ನು ನಡೆಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಶೇ.91-92 ರಷ್ಟು ಸಮೀಕ್ಷೆ ಮುಗಿದಿದೆ ಎಂದು ಹೇಳುತ್ತಿದೆ. ಇದುವರೆಗೆ 1,06,28.325 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಶೇ.50 ರಷ್ಟು ಜನರು ಮಾತ್ರ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಇನ್ನೂ ಉಳಿದದವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಪದೇ ಪದೇ ಅವಧಿ ವಿಸ್ತರಣೆ ಮಾಡದೆ ನ್ಯಾಯಾಮೂರ್ತಿ ನಾಗಮೋಹನದಾಸ್ ಆಯೋಗವು ವರದಿಯನ್ನು ತ್ವರಿತವಾಗಿ ಸರ್ಕಾರಕ್ಕೆ ಸಲ್ಲಿಸಿ, ತಕ್ಷಣವೇ ರಾಜ್ಯ ಸರ್ಕಾರ ಆದಷ್ಟು ಬೇಗ ಒಳ ಮೀಸಲಾತಿ ಜಾರಿ ಮಾಡಬೇಕೆಂದು ಶಿವಮೂರ್ತಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಜಶೇಖರ ಬಸವನಪುರ, ಕೊಳ್ಳೇಗಾಲ ತಾಲೂಕು ಬಾಬುಜಗಜೀವನರಾಂ ಸಂಘದ ಅಧ್ಯಕ್ಷ ಬಾಲರಾಜು, ಹನೂರು ತಾಲೂಕು ಬೂದುಬಾಳು ಮಹದೇವು, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ನಿಟ್ರೆ ಮಹದೇವು, ಯಳಂದೂರು ತಾಲೂಕು ಸಂಘದ ಅಧ್ಯಕ್ಷ ಕೆಸ್ತೂರು ಮರಪ್ಪ, ಗ್ರಾ.ಪಂ.ಸದಸ್ಯ ಹಾಲಹಳ್ಳಿ ಗೋವಿಂದ, ನರಸಿಂಹ, ಸಿದ್ದರಾಜು ಹಾಜರಿದ್ದರು.ಡಾ.ತಿಮ್ಮಯ್ಯ ಬಗ್ಗೆ ಅಪಪ್ರಚಾರ

ಸರಿಯಲ್ಲ: ಎಂ.ಶಿವಮೂರ್ತಿವಿಧಾನ ಪರಿಷತ್ತಿನ ಸದಸ್ಯ ಡಾ.ಡಿ.ತಿಮ್ಮಯ್ಯ ಅವರು ಒಳ ಮೀಸಲಾತಿಯ ವಿರೋಧಿಯಲ್ಲ. ಅವರು ಒಳ ಮೀಸಲಾತಿಯ ಪರವಾಗಿದ್ದಾರೆ. ಒಳ ಮೀಸಲಾತಿ ಜಾರಿ ಮಾಡಲು ಕಂಕಣಬದ್ಧರಾಗಿದ್ದಾರೆ. ಅವರ ಬಗ್ಗೆ ತಿಳಿವಳಿಕೆ ಇಲ್ಲದವರು ಮಾತನಾಡುತ್ತಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಜಿಲ್ಲಾ ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟ ಅಧ್ಯಕ್ಷ ಎಂ.ಶಿವಮೂರ್ತಿ ಪ್ರತಿಕ್ರಿಯಿಸಿದರು. ಡಾ.ತಿಮ್ಮಯ್ಯ ಅವರು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದು, ವೈದ್ಯ ಅಧಿಕಾರಿಯಾಗಿದ್ದ ಕಾಲದಿಂದಲೂ ಸಮಾಜ ಪರ ಅಪಾರ ಕಾಳಜಿ ಇಟ್ಟುಕೊಂಡು ಬಂದಿದ್ದಾರೆ ಅಂತಹವರ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಲೂರು ದೇವಸ್ಥಾನಕ್ಕೆ ಡಿಸಿ ಭೇಟಿ
ವಾಕ್, ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ ಮಾದರಿ