ಕನ್ನಡಪ್ರಭ ವಾರ್ತೆ ಮಂಡ್ಯ
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ವಿಘಟವಾಗುವ ರೀತಿ ಅಸ್ಥಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಞರಿಂದ ವರದಿ ಪಡೆದು ಡಿಪಿಆರ್ ಸಿದ್ಧಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ, ಶ್ರೀರಂಗಪಟ್ಟಣ ನಗರಸಭೆ ಆಯುಕ್ತ ರಾಜಣ್ಣ ಇತರರು ಉಪಸ್ಥಿತರಿದ್ದರು.ಫೆ.೨ರಂದು ಭರತನಾಟ್ಯ ನೃತ್ಯ ಪ್ರದರ್ಶನ
ನೃತ್ಯ ಚೇತನ ಕಲಾ ಟ್ರಸ್ಟ್ ವತಿಯಿಂದ ಫೆ.೨ರಂದು ಸಂಜೆ ೫ ಗಂಟೆಗೆ ನಗರದ ವಿವೇಕಾನಂದ ರಂಗಮಂದಿರದಲ್ಲಿ ಕಲಾವೈಭವ ಶಾಸ್ತ್ರೀಯ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಸಾಹಿತಿ ಪ್ರದೀಪ್‌ಕುಮಾರ್ ಹೆಬ್ರಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರಸಭಾಧ್ಯಕ್ಷ ಎಂ.ವಿ. ಪ್ರಕಾಶ್ (ನಾಗೇಶ್) ಉದ್ಘಾಟಿಸುವರು. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಎಸ್.ಡಿ. ಜಯರಾಂ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್‌ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.