ನೀರಿನ ಸಂಗ್ರಹ ವರದಿ ಪ್ರತಿದಿನ ನೀಡಿ

KannadaprabhaNewsNetwork |  
Published : May 09, 2026, 02:45 AM IST
8ಐಎನ್‌ಡಿ1,ಇಂಡಿ ಪ್ರವಾಸಿ ಮಂದಿರದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ ಸಭೆ ಜರುಗಿತು. | Kannada Prabha

ಸಾರಾಂಶ

ಉಜನಿಯ ಜಲಾಶಯದಿಂದ ಭೀಮಾನದಿಗೆ 16 ಟಿಎಂಸಿ ನೀರು ಬಿಟ್ಟಿದ್ದು, ಇದರಿಂದ ಇಂಡಿ ನಗರ ಹಾಗೂ ನದಿ ದಂಡೆಯ ಮೇಲಿನ ಗ್ರಾಮಗಳ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಆದರೆ, ಅಧಿಕಾರಿಗಳು ಭೀಮಾನದಿ ಬ್ಯಾರೇಜ್‌ಗಳಲ್ಲಿನ ನೀರಿನ ಸಂಗ್ರಹದ ಕುರಿತು ಪ್ರತಿನಿತ್ಯ ವರದಿ ನೀಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ಉಜನಿಯ ಜಲಾಶಯದಿಂದ ಭೀಮಾನದಿಗೆ 16 ಟಿಎಂಸಿ ನೀರು ಬಿಟ್ಟಿದ್ದು, ಇದರಿಂದ ಇಂಡಿ ನಗರ ಹಾಗೂ ನದಿ ದಂಡೆಯ ಮೇಲಿನ ಗ್ರಾಮಗಳ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಆದರೆ, ಅಧಿಕಾರಿಗಳು ಭೀಮಾನದಿ ಬ್ಯಾರೇಜ್‌ಗಳಲ್ಲಿನ ನೀರಿನ ಸಂಗ್ರಹದ ಕುರಿತು ಪ್ರತಿನಿತ್ಯ ವರದಿ ನೀಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಟಾಸ್ಕಫೋರ್ಸ್‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಉಪ ವಿಭಾಗಾಧಿಕಾರಿ ನಿತ್ಯ ಗ್ಯಾರೇಜ್‌ಗಳ ಪರಿಶೀಲನೆ ಮಾಡಬೇಕು. ಪ್ರತಿ ಕೆರೆಯಲ್ಲಿ ಕನಿಷ್ಠ ಶೇ.50 ರಷ್ಟು ನೀರು ಸಂಗ್ರಹ ಇರುವಂತೆ ನೋಡಿಕೊಳ್ಳಬೇಕು. ತಾಲೂಕಿನ ಯಾವುದೇ ಜನವಸತಿ ಪ್ರದೇಶ(ಅಡವಿ ಪ್ರದೇಶ) ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನಿಗಾ ವಹಿಸಬೇಕು. ಬೇಸಿಗೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ತೊಂದರೆಯಾಗಬಾರದು. ನಿಂಬಾಳ ಕೆಡಿಯಲ್ಲಿ ನಿರ್ಮಾಣವಾಗುತ್ತಿರುವ ವಿದ್ಯುತ್ ವಿತರಣಾ ಕೇಂದ್ರ ಬೇಗನೆ ಪೂರ್ಣಗೊಳಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಗ್ರಾಮ ಪಂಚಾಯತಿ ಆಡಳಿತಾಧಿಕಾರಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳು ಸಮನ್ವಯತೆ ಸಾಧಿಸಿ, ಸಕ್ರಿಯವಾಗಿ ತೊಡಗಬೇಕು. ಪ್ರತಿ ಸೋಮವಾರ ಟಾಸ್ಕಫೋರ್ಸ್‌ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ಸಂಗ್ರಹಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು. ಇಂಡಿ ನಗರದಲ್ಲಿ ಪೈಪಲೈನ್‌ ಕಾಮಗಾರಿ ನಡೆದಿರುವುದರಿಂದ ಭೂಮಿ ಅಗೆಯುವಾಗ ಕುಡಿಯುವ ನೀರಿನ ಪೈಪ್‌ ಹಾಗೂ ಇತರೆ ವಸ್ತುಗಳು ಹಾನಿಯಾದರೆ ಕೂಡಲೇ ದುರಸ್ತಿಗೊಳಿಸಬೇಕು, ಕ್ರಮ ವಹಿಸಬೇಕು. ಭೂಮಿ ಅಗೆಯುವುದರಿಂದ ರಸ್ತೆಯ ಮೇಲೆ ಬಿದ್ದಿರುವ ಧೂಳು ತೆರವುಗೊಳಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಲುವೆ ಮೂಲಕ ಕೆರೆ ತುಂಬಿಸಬಲಾಗಿದೆ. ಭೀಮಾನದಿಗೆ ನೀರು ಹರಿದು ಬಿಡಲಾಗಿದೆ. ಇಷ್ಟು ಇದ್ದರೂ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ತಲೆದೊರಿದೆ ಎಂಬ ದೂರು ಸಾರ್ವಜನಿಕರಿಂದ ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಡಿವೈಎಸ್ಪಿ ಸದಾಶಿವ ಕಟ್ಟಿಮನಿ, ತಹಸೀಲ್ದಾರ್‌ ಬಿ.ಎಸ್‌.ಕಡಕಭಾವಿ, ತಾಪಂ ಇಒ ಮಹಾದೇವಪ್ಪ ಏವೂರ, ಪೌರಾಯುಕ್ತ ಶಿವಾನಂದ ಪೂಜಾರಿ, ಕೆಬಿಜೆಎನ್‌ಎಲ್‌ ಅಧಿಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ, ತೋಟಗಾರಿಕೆ ಎಡಿ ಎಚ್‌.ಎಸ್‌.ಪಾಟೀಲ, ಸಿಡಿಪಿಒ ಗೀತಾ ಗುತ್ತರಗಿಮಠ,ಆರ್‌ಎಫ್‌ಒ ಮಂಜುನಾಥ ಧೂಳೆ, ಸಂಗಾಲಕ, ಸಮಾಜ ಕಲ್ಯಾಣಾಧಿಕಾರಿ ಉಮೇಶ ಲಮಾಣಿ, ಬಿಸಿಎಂ ಅಧಿಕಾರಿ ಗದ್ಯಾಳ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕೆಬಿಜೆಎನ್‌ಎಲ್‌ ಇಂಜನೀಯರ್‌,ನಗರ ನೀರು ಸರಬರಾಜು ಒಳಚರಂಡಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಆಡಳಿತಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಬೇಸಿಗೆ ಪೂರ್ಣಗೊಳ್ಳುವವರೆಗೆ ಜವಾಬ್ದಾರಿಯಿಂದ, ಕ್ರೀಯಾಶೀಲನೆಯಿಂದ ಕರ್ತವ್ಯ ನಿರ್ವಹಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ವಹಿಸಬಾರದು.

-ಯಶವಂತರಾಯಗೌಡ ಪಾಟೀಲ, ಶಾಸಕರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರು ಧರ್ಮದ ಹಾದಿಯಲ್ಲಿ ನಡೆಯಲಿ: ಅಭಿನವ ಸಿದ್ಧಲಿಂಗ ಶ್ರೀ
ದಾನಮ್ಮ ಉತ್ಸವ ದೇಸಿ ಸಂಸ್ಕೃತಿಗೆ ಹಿಡಿದ ಕನ್ನಡಿ: ಎಂ.ಎ.ಮೋರೆ