ಸುಬ್ರಹ್ಮಣ್ಯ: ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Apr 28, 2025, 11:47 PM IST
32 | Kannada Prabha

ಸಾರಾಂಶ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಕುಕ್ಕೆ ಸುಬ್ರಹ್ಮಣ್ಯ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಕುಕ್ಕೆ ಸುಬ್ರಹ್ಮಣ್ಯ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ನಡೆಯಿತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಅತ್ಯಂತ ಖಂಡನೀಯ. ಇಂತಹ ಘಟನೆ ಮುಂದೆ ನಡೆಯಬಾರದು, ಈ ನಿಟ್ಟಿನಲ್ಲಿ ನಾವೆಲ್ಲರೂ ಭಾರತೀಯರಾಗಿ ಒಗ್ಗಟ್ಟು ಪ್ರದರ್ಶಿಸಬೇಕು. ಕೇಂದ್ರ ಸರ್ಕಾರ ಈಗಾಗಲೇ ದೇಶಕ್ಕೆ ಆಘಾತ ನೀಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದು, ಅದನ್ನು ಆದಷ್ಟು ಬೇಗ ಮಾಡಬೇಕು ಎಂದರು.

ನಿವೃತ್ತ ಅಧಿಕಾರಿ ಅಶೋಕ್ ಮೂಲೆಮಜಲು ಮಾತನಾಡಿ, ಬೇಸರದ ದಿನಗಳಲ್ಲಿ ನಾವಿದ್ದೇವೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಭಯೋತ್ಪಾದಕರ ವಿರುದ್ಧ ಸಮರ ಸಾರಿ, ಭಾರತದ ಮೇಲೆ ಮುಂದೆ ಯಾವುದೇ ಇಂತಹ ಕೃತ್ಯ ನಡೆಯಲು ಮುಂದಾಗದಂತಹ ಎಚ್ಚರಿಕೆ ನೀಡಬೇಕು, ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಪ್ರಮುಖರಾದ ಪದ್ಮಕುಮಾರ್ ಗುಂಡಡ್ಕ, ಸುಜಾತ ಕಲ್ಲಾಜೆ, ರಾಜೇಶ್ ಎನ್.ಎಸ್., ಶ್ರೀಕುಮಾರ್ ಬಿಲದ್ವಾರ, ಡಾ.ರವಿಕಕ್ಕೆಪದವು, ಲಲಿತಾ ಗುಂಡಡ್ಕ, ಗಿರೀಶ್ ಆಚಾರ್ಯ,ಯಶೋಧಕೃಷ್ಣ, ಜಯಪ್ರಕಾಶ್ ಬಾಳುಗೋಡು, ಡಾ.ತಿಲಕ್ ಎ ಎ, ದುಗ್ಗಪ್ಪ ನಾಯಕ್, ಚಿದಾನಂದ ಕಂದಡ್ಕ, ಮೋನಪ್ಪ ಮಾನಾಡು, ಸೀತಾರಾಮ ಪೊಸವಳಿಕೆ, ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಘಟನೆ ಖಂಡಿಸಿ ಪೇಟೆಯ ವರ್ತಕರು ಒಂದರಿಂದ ಎರಡು ತಾಸು ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದರು. ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!