ಕನ್ನಡಪ್ರಭ ವಾರ್ತೆ ನಾಪೋಕ್ಲು
ನಾಗನಕಟ್ಟೆಯಲ್ಲಿ ನಾಗನ ಪ್ರತಿಕೃತಿಗಳಿಗೆ ಹಾಲು, ಎಳೆನೀರು ಅಭಿಷೇಕದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಆ ಬಳಿಕ ದೇವಾಲಯದಲ್ಲಿ ಮಹಾಪೂಜೆ ತೀರ್ಥ ಪ್ರಸಾದ ವಿತರಣೆಯ ನಂತರ ಭಕ್ತಾದಿಗಳಿಗೆ ಅನ್ನದಾನ ನೆರವೇರಿತು.
ಪೂಜಾ ವಿಧಿ ವಿಧಾನವನ್ನು ದೇವಾಲಯದ ಮುಖ್ಯ ಅರ್ಚಕ ದೇವಿ ಪ್ರಸಾದ ನೆರವೇರಿಸಿದರು. ಈ ಸಂದರ್ಭ ದೇವಾಲಯದ ಪಾರುಪತ್ತೆಗಾರ ಮನು ಟಿ.ಕೆ ಹಾಗೂ ಗಗನ್ ಮುತ್ತಪ್ಪ, ನಿರನ್ ಸೇರಿದಂತೆ ಊರ ಮತ್ತು ಪರ ಊರಿನ ಭಕ್ತಾದಿಗಳುಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಿ ಹರಕೆ ಕಾಣಿಕೆ ಒಪ್ಪಿಸಿ ಭಕ್ತಿ ಪರವಶಾರಾದರು.