ತಗ್ಗಿದ ಪ್ರವಾಹ: ಉಗಾರ-ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ

KannadaprabhaNewsNetwork |  
Published : Aug 10, 2024, 01:32 AM IST
ಸೇತುವೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕಾಗವಾಡ ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ಕೃಷ್ಣೆಯ ಪ್ರವಾಹ ಕೂಡ ತಗ್ಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ಸೇತುವೆ ಶುಕ್ರವಾರ ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡಿದೆ. ಜನರು ಹಾಗೂ ವಾಹನಗಳ ಸಂಚಾರ ಆರಂಭವಾಗಿದ್ದು, ಜನರು ನಿಟ್ಟುಸಿರುವ ಬಿಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಕಾಗವಾಡ

ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ಕೃಷ್ಣೆಯ ಪ್ರವಾಹ ಕೂಡ ತಗ್ಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ಸೇತುವೆ ಶುಕ್ರವಾರ ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡಿದೆ. ಜನರು ಹಾಗೂ ವಾಹನಗಳ ಸಂಚಾರ ಆರಂಭವಾಗಿದ್ದು, ಜನರು ನಿಟ್ಟುಸಿರುವ ಬಿಟ್ಟಿದ್ದಾರೆ.ಮಹಾರಾಷ್ಟ್ರದ ಕೋಯ್ನಾ ಸೇರಿದಂತೆ ವಿವಿಧ ಜಲಾಶಯಗಳಿಂದ ಪ್ರತಿದಿನ ಎರಡು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಕರ್ನಾಟಕಕ್ಕೆ ಹರಿದು ಬರುತ್ತಿದ್ದು, ವರುಣ ಆರ್ಭಟ ತಗ್ಗಿದ್ದರಿಂದ ಕೃಷ್ಣಾ ನದಿಯ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಇದರಿಂದ ಉಗಾರ-ಕುಡಚಿ ಸೇರಿದಂತೆ ಅಥಣಿ, ಕಾಗವಾಡ ತಾಲೂಕಿನ ಎಲ್ಲಾ ರಸ್ತೆಗಳು ಸಂಚಾರಕ್ಕೆ ಮುಕ್ತಗೊಂಡಿವೆ.

ಕಳೆದ 8 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಅಥಣಿ, ಚಿಕ್ಕೋಡಿ ಹಾಗೂ ರಾಯಬಾಗ ತಾಲ್ಲೂಕಿನ ಹಲವಾರು ಗ್ರಾಮಗಳ ತಗ್ಗು ಪ್ರದೇಶದಲ್ಲಿಯ ಸಾವಿರಾರು ಎಕರೆ ಭೂ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದೆ.ಕಾಗವಾಡ ತಾಲ್ಲೂಕಿನ ಕೃಷ್ಣಾ ನದಿ ತೀರದ ಜುಗೂಳ, ಮಂಗಾವತಿ, ಶಹಾಪೂರ, ಕುಸನಾಳ, ಮೊಳವಾಡ, ಉಗಾರ, ಕೃಷ್ಣಾ ಕಿತ್ತೂರ, ಕಾತ್ರಾಳ, ಬಣಜವಾಡ, ಅಥಣಿ ತಾಲೂಕಿನ ತೀರ್ಥ, ಸಪ್ತಸಾಗರ, ನಾಗನೂರ, ಸವದಿ, ನದಿ-ಇಂಗಳವಾಗ, ಸಪ್ತಸಾಗರ, ಸವದಿ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ಆವರಿಸಿತ್ತು. ಪ್ರವಾಹ ಕ್ಷೀಣಿಸಿದ್ದು, ಉಗಾರ-ಕುಡಚಿ, ಉಗಾರ ಖುರ್ದ-ಉಗಾರ ಬುದ್ರುಕ್ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವ ಪ್ರಾಜೆಕ್ಟ್‌ ಮೆಜೆಸ್ಟಿಕ್‌
ಬೀಗ ಹಾಕಿದ ಮನೆಗಳಿಗೆ ಕನ್ನಹಾಕುತ್ತಿದ್ದ ಐವರು ಕಳ್ಳರ ಸೆರೆ