ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ

KannadaprabhaNewsNetwork |  
Published : Sep 01, 2024, 01:52 AM IST
ಅರ್ಜಿ | Kannada Prabha

ಸಾರಾಂಶ

ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆಕ್ಟೇರ್‌ ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್‌ ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲ ವರ್ಗದ ರೈತರಿಗೆ 2 ಹೆಕ್ಟೇರ್‌ ವರೆಗೆ ಶೇ.90 ಹಾಗೂ 2 ಹೆ. ಮೇಲ್ಪಟ್ಟು 5 ಹೆಕ್ಟೇರ್‌ ವರೆಗೆ ಶೇ. 45 ಸಹಾಯಧನ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಲು ಇಚ್ಛಿಸುವ ಎಲ್ಲ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆಕ್ಟೇರ್‌ ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್‌ ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲ ವರ್ಗದ ರೈತರಿಗೆ 2 ಹೆಕ್ಟೇರ್‌ ವರೆಗೆ ಶೇ.90 ಹಾಗೂ 2 ಹೆ. ಮೇಲ್ಪಟ್ಟು 5 ಹೆಕ್ಟೇರ್‌ ವರೆಗೆ ಶೇ. 45 ಸಹಾಯಧನ ನೀಡಲಾಗುವುದು.ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಬೇಕು. ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದರಿಂದ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ರೈತರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.ಆಸಕ್ತ ರೈತರು ಅರ್ಜಿ, ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರ, ಜಾತಿ ಪ್ರಮಾಣ ಪತ್ರ ಹಾಗೂ ಹನಿ/ತುಂತುರು ನೀರಾವರಿ ಅಳವಡಿಸುವ ಕಂಪನಿಯ ವಿವರದೊಂದಿಗೆ ಇಲಾಖೆಯ ತಾಲೂಕು ಕಛೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.), ಉಡುಪಿ ದೂ.ಸಂಖ್ಯೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ ತಾಲೂಕು ದೂ.ಸಂಖ್ಯೆ: 0820-2522837, ಕುಂದಾಪುರ ತಾಲೂಕು ದೂ.ಸಂಖ್ಯೆ: 08254-230813 ಹಾಗೂ ಕಾರ್ಕಳ ತಾಲೂಕು ದೂ.ಸಂಖ್ಯೆ: 08258-230288 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ಯಾಕುಮಾರಿಗೆ ಸುರೇಶ್‌ ಕುಮಾರ! ಸೈ‘ಕ್ಲಿಂಗ್‌’!
ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಸಜ್ಜು