ಆಶ್ರಯ ಯೋಜನೆ ಫಲಾನುಭವಿಗಳಿಗೆ ಸಹಾಯಧನ ಹೆಚ್ಚಳ: ಶಾಸಕ ಮಾನೆ

KannadaprabhaNewsNetwork |  
Published : Apr 04, 2026, 02:15 AM IST
ಹರವಿ ಗ್ರಾಮದಲ್ಲಿ ೭೧ ಲಕ್ಷ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಆಶ್ರಯ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಸಹಾಯಧನವನ್ನು ಸಾಮಾನ್ಯ ವರ್ಗಕ್ಕೆ ೨ ಲಕ್ಷ ರು., ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ೩ ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾನಗಲ್ಲ: ಆಶ್ರಯ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಸಹಾಯಧನವನ್ನು ಸಾಮಾನ್ಯ ವರ್ಗಕ್ಕೆ ೨ ಲಕ್ಷ ರು., ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ೩ ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.ತಾಲೂಕಿನ ಹರವಿ ಗ್ರಾಮದಲ್ಲಿ ೭೧ ಲಕ್ಷ ರು. ವೆಚ್ಚದಲ್ಲಿ ಸಿಸಿರಸ್ತೆ, ಗಟಾರ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಆಶ್ರಯ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಸಹಾಯಧನ ಹೆಚ್ಚಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸಹಾಯಧನ ಸಾಲುತ್ತಿರಲಿಲ್ಲ. ಇದೀಗ ಸಹಾಯಧನ ಹೆಚ್ಚಿಸಿರುವುದರಿಂದ ಬಡ ವರ್ಗಕ್ಕೆ ಅನುಕೂಲವಾಗಿದೆ ಎಂದು ತಿಳಿಸಿದ ಶಾಸಕ ಮಾನೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲ ಬಡವರು, ಜನಸಾಮಾನ್ಯರಿಗೆ ಅನುಕೂಲವಾಗುವಂಥ ಯೋಜನೆಗಳನ್ನು ರೂಪಿಸಿದೆ. ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಅಧಿಕಾರ ನಡೆಸಿದಾಗಲೆಲ್ಲ ಎಲ್ಲ ವರ್ಗ, ಸಮುದಾಯಗಳಿಗೂ ಅನುಕೂಲವಾಗಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಬಸವರಾಜಪ್ಪ ಭದ್ರಣ್ಣನವರ, ಗನಿಪಟೇಲ್ ಪಾಟೀಲ, ನಾಗರಾಜ್ ಯರೇಶಿಮಿ, ಶಂಭುಲಿಂಗಪ್ಪ ಭದ್ರಣ್ಣನವರ, ಶಿವಾನಂದ ಭದ್ರಣ್ಣನವರ, ಚನ್ನಪ್ಪ ಬಾಣದ, ರವಿ ಭದ್ರಣ್ಣನವರ, ಪುಟ್ಟಪ್ಪ ಹರಿಜನ, ಶೇಕಪ್ಪ ಹರಿಜನ, ಇಸ್ಮಾಯಿ ಲ್‌ಸಾಬ ಹರಪನಹಳ್ಳಿ, ಸಂಗಪ್ಪ ತಳವಾರ, ಶಾಂತವ್ವ ಹರಿಜನ, ಪುಟ್ಟವ್ವ ತಳವಾರ, ನಾನಾ ಬಳಿಗಾರ, ಮಹೇಶ ಭದ್ರಣ್ಣನವರ, ಆದರ್ಶ ಶೆಟ್ಟಿ, ರವಿ ದೇಶಪಾಂಡೆ, ಪುಟ್ಟಪ್ಪ ನರೇಗಲ್, ಅಶೋಕ ಹಲಸೂರ, ಬಸವನಗೌಡ ಪಾಟೀಲ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಷ್ಟಗಿಯಿಂದ ಬೆಂಗಳೂರಿಗೆ ರೈಲ್ವೆ ಓಡಿಸಲು ಮನವಿ
ಡಾ. ಆರ್.ಕೆ. ಕುಲಕರ್ಣಿ ಆರೋಗ್ಯ ಸೇವೆ ಸದಾ ಸ್ಮರಣೀಯ: ಅಶುತೋಷ್ ಕುಮಾರ್ ರಾಯ್