ಪ್ರವಾದಿ ಸಂದೇಶ ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು: ಖಾದರ್‌

KannadaprabhaNewsNetwork |  
Published : Apr 12, 2025, 12:45 AM IST
ಪ್ರವಾದಿ ಸಂದೇಶಗಳನ್ನು ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ವಿ : ಖಾದರ್  | Kannada Prabha

ಸಾರಾಂಶ

ಮೂಡುಬಿದಿರೆ ಸಮೀಪದ ಪುಚ್ಚಮೊಗರು ಎಲಿಯಾ ದರ್ಗಾದ ಉರೂಸ್ ಸಮಾರಂಭ ಪ್ರಯುಕ್ತ ಹಮ್ಮಿಕೊಂಡಿದ್ದ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಪ್ರವಾದಿ ಮುಹಮ್ಮದ್ ಮುಸ್ತಫಾ ಸಂದೇಶಗಳನ್ನು ಹಿರಿಯರು, ಉಲೆಮಾ -ಉಮರಾಗಳ ಮಾತುಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಹೋದಲ್ಲಿ ಸರ್ವಜನರ ಪ್ರೀತಿಗೆ ಪಾತ್ರರಾಗಲು ಮತ್ತು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.

ಮೂಡುಬಿದಿರೆ ಸಮೀಪದ ಪುಚ್ಚಮೊಗರು ಎಲಿಯಾ ದರ್ಗಾದ ಉರೂಸ್ ಸಮಾರಂಭ ಪ್ರಯುಕ್ತ ಹಮ್ಮಿಕೊಂಡಿದ್ದ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಯುವಜನತೆ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು, ಹಿಂದೆಲ್ಲಾ ಯಾವುದೇ ಧರ್ಮದ ಹಿರಿಯರು ರಸ್ತೆಯಲ್ಲಿ ಬಂದಾಗ ಎದ್ದು ನಿಂತು ಗೌರವ ಕೊಡಲಾಗುತ್ತಿತ್ತು. ಅದು ನಮ್ಮ ಸಂಸ್ಕೃತಿ, ಆ ಸಂಸ್ಕೃತಿ ಮುಂದುವರಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಇಂದಿನ ಯುವಜನಾಂಗದ್ದು ಎಂದು ಹೇಳಿದರು.ಯುವ ಜನಾಂಗ ಸಮಾಜ ಕಟ್ಟುವವರಾಗಬೇಕು- ಸಮಾಜ ಒಡೆಯುವವರಾಗಬಾರದು, ಸಮಸ್ಯೆಗಳಿಗೆ ಪರಿಹಾರ ಒದಗಿಸುವವರಾಗಬೇಕು- ಸಮಸ್ಯೆ ಸೃಷ್ಟಿಸುವವರಾಗಬಾರದು ಎಂದರು.

ನಮ್ಮೆಲ್ಲರ ಆಯುಷ್ಯ ಎಷ್ಟು ಕಾಲ ಅಂತ ಯಾರಿಗೂ ಗೊತ್ತಿಲ್ಲ, ಇದ್ದಷ್ಟು ಕಾಲ ಪರಸ್ಪರ ಸಹಬಾಳ್ವೆಯಿಂದ ಶಾಂತಿ, ಸಹನೆಯಿಂದ ಇದ್ದು,ನಾವೂ ನೆಮ್ಮದಿಯಿಂದ ಇದ್ದು ಇನ್ನೊಬ್ಬರೂ ನೆಮ್ಮದಿಯಿಂದ ಇರುವಂತೆ ಬಾಳಬೇಕೆಂದು ಹೇಳಿದರು.

ಎಲಿಯಾ ಮಸೀದಿ ಕಮಿಟಿ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಎಲ್ಲಿ ಸಂಶಯ ಇರುತ್ತದೋ ಅಲ್ಲಿ ಸೌಹಾರ್ದತೆ ಕಾಣಲು ಸಾಧ್ಯವಿಲ್ಲ, ಎಲ್ಲಿ ಸೌಹಾರ್ದತೆ ಇರುತ್ತದೋ ಅಲ್ಲಿ ಸಂಶಯವಿರಲು ಸಾಧ್ಯವಿಲ್ಲ, ಮಂದಿನ ಯುವ ಜನಾಂಗ ನಮ್ಮಲ್ಲಿರುವ ಸೌಹಾರ್ದತೆಯನ್ನು ಹಿರಿಯರಂತೆಯೇ ಉಳಿಸಿಕೊಂಡು ಜೀವನ ನಡೆಸಬೇಕು ಎಂದರು.

‌ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಫಾರೂಕ್ ಉಳ್ಳಾಲ, ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯಾದವ ಶೆಟ್ಟಿ, ಮೂಡುಬಿದಿರೆ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ, ಇರುವೈಲು ಗ್ರಾ.ಪಂ.ಅಧ್ಯಕ್ಷ ವಲೇರಿಯನ್ ಕುಟಿನ್ಹಾ, ಸದಸ್ಯರಾದ ಪ್ರದೀಪ್ ಪೂಜಾರಿ, ಎಂ.ಎ.ಅಶ್ರಫ್, ಕೆ.ಪಿ.ಸಿ.ಸಿ‌.ಸದಸ್ಯ ಚಂದ್ರಹಾಸ ಸನಿಲ್, ಸತೀಶ್ಚಂದ್ರ ಸಾಲ್ಯಾನ್ ಪಾಣಿಲ,ಕೆ.ಡಿ.ಪಿ.ಸದಸ್ಯ ಪ್ರವೀಣ್ ಕುಮಾರ್, ಗ್ರಾ.ಪಂ.ಮಾಜಿ ಸದಸ್ಯ ಕುಮಾರ್ ಪೂಜಾರಿ, ಪತ್ರಕರ್ತ ಅಶ್ರಫ್ ವಾಲ್ಪಾಡಿ, ಎಸ್.ಡಿ.ಪಿ.ಐ ಮೂಡುಬಿದಿರೆ-ಮೂಲ್ಕಿ ಉಪಾಧ್ಯಕ್ಷ ಆಸಿಫ್ ಕೋಟೆಬಾಗಿಲು, ಗ್ರಾ.ಪಂ.ಮಾಜಿ ಸದಸ್ಯ ಮೈಕಲ್‌ ನೊರೊನ್ಹ, ವಿಜಯಕುಮಾರ್ ಹೆಗ್ಡೆ,ರಾಜೇಶ್ ಪೂಜಾರಿ ಕಾಳೂರು ಮತ್ತಿತರರು ಪಾಲ್ಗೊಂಡರು.

ಅಸ್ಸಯ್ಯದ್ ಇಬ್ರಾಹಿಂ ಜುನೈದ್ ಅರ್ರಿಫಾಯಿ ತಂಙಳ್ ಬಾರ್ಕೂರು ದುವಾ ನೆರವೇರಿಸಿದರು. ಮಸೀದಿ ಕಮಿಟಿ ಕೋಶಾಧಿಕಾರಿ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಉಪಾಧ್ಯಕ್ಷ ಉಸ್ಮಾನ್ ವಂದಿಸಿದರು. ಡಿ.ಎ.ಉಸ್ಮಾನ್, ನೌಫಲ್ ಕಾರ್ಯಕ್ರಮ ನಿರೂಪಿಸಿದರು.

ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ನೇತೃತ್ವದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ವಾಗ್ಮಿ ಸಿರಾಜುದ್ದೀನ್ ಖಾಸಿಮಿ ಅವರಿಂದ ಮುಖ್ಯ ಪ್ರಭಾಷಣ ನಡೆಯಿತು.

ಮಸೀದಿ ಕಮಿಟಿ ಕಾರ್ಯದರ್ಶಿ ಇಮ್ರಾನ್, ಖಾದರ್,ಕುಞ್ಞಿಮೋನು, ವಸೀರ್,ಇಸ್ಮಾಯಿಲ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?