ನಿರಂತರ ಪರಿಶ್ರಮ ಪಟ್ಟರೆ ಯಶಸ್ಸು ಖಚಿತ: ಡಾ.ಸಚಿನ್ ನಳೆ

KannadaprabhaNewsNetwork |  
Published : Aug 09, 2026, 01:45 AM IST
8ಕೆಎಂಎನ್ ಡಿ27 | Kannada Prabha

ಸಾರಾಂಶ

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಂಡರೆ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಮುಂದಿನ ಹತ್ತು ವರ್ಷಗಳಲ್ಲಿ ತಾನು ಏನಾಗಬೇಕು ಎಂಬ ಗುರಿ ನಿಗದಿಪಡಿಸಿಕೊಂಡು ನಿರಂತರ ಪರಿಶ್ರಮ ಪಟ್ಟರೆ ಯಶಸ್ಸು ಖಚಿತ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಚಟ್ಟಂಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಚಿನ್ ಮೈಂಡ್ ಮೆಮೋರಿಯಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ಟ್ಯಾಬ್ ಹಾಗೂ ರೈಟಿಂಗ್ ಪ್ಯಾಡ್‌ ವಿತರಿಸಿದ ಭಾವನಾ ಪುಣೆಕರ್ ಮಾಕತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಂಡರೆ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.

ಜಠರ ಹಾಗೂ ಜೀಣಾಂಗ ಶಸ್ತ್ರಚಿಕಿತ್ಸಕ ತಜ್ಞ ವೈದ್ಯ ಡಾ.ಸಚಿನ್ ನಳೆ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಮುಂದಿನ ಹತ್ತು ವರ್ಷಗಳಲ್ಲಿ ತಾನು ಏನಾಗಬೇಕು ಎಂಬ ಗುರಿ ನಿಗದಿಪಡಿಸಿಕೊಂಡು ನಿರಂತರ ಪರಿಶ್ರಮ ಪಟ್ಟರೆ ಯಶಸ್ಸು ಖಚಿತ ಎಂದರು. ರೋಗ್ಯಕರ ಜೀವನಶೈಲಿ ಮತ್ತು ಸಮಯ ನಿರ್ವಹಣೆ ಮಹತ್ವವ ವಿವರಿಸಿದರು. ನಂತರ ವಿದ್ಯಾರ್ಥಿಗಳಿಗೆ ರೈಟಿಂಗ್ ಟೇಬಲ್‌ಗಳನ್ನು ವಿತರಿಸಿದರು.

ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ರಚನಾ ಕಾಥನೆ, ಸಾಫ್ಟ್‌ವೇರ್ ಎಂಜಿನಿಯರ್ ಸಂಜೋಗ್ ರಾಮಟೆಕೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಟಾಪರ್ ಪ್ರಶಸ್ತಿಯನ್ನು ಆರ್.ಕೆ.ಶ್ರಾವಣಿ ಹಾಗೂ ಬೆಸ್ಟ್ ಆಲ್ ರೌಂಡರ್ ಪರ್ಫಾರ್ಮೆನ್ಸ್ ಪ್ರಶಸ್ತಿಯನ್ನು ಆರ್.ಎಂ.ಅಮೃತಾ ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳಿಗೆ ಟ್ರೋಫಿ, ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಜೊತೆಗೆ ಇತರೆ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಮುಖ್ಯ ಶಿಕ್ಷಕ ಜೆ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ ಆರ್.ಜೆ, ಶಿಕ್ಷಕರಾದ ಹರೀಶ್ ಕೆ., ನಿರ್ಮಲ ಬಿ, ಮನೋಜ್‌ಕುಮಾರ್, ತೇಜಸ್ವಿನಿ, ಹರ್ಷಿತಾ ಹಾಗೂ ಅಂಜನ್‌, ಬಳ್ಳೇಕೆರೆ ಸಣ್ಣೇಗೌಡ, ಪ್ರೇಮ ಬೆಟ್ಟೇಗೌಡ, ಲತಾ ರಂಗಸ್ವಾಮಿ ಮುಂತಾದ ಗಣ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಾಟಮ್‌...ಕುಡಿವ ನೀರಿನ ಕೊರತೆಯಾಗದಂತೆ ನಿಗಾವಹಿಸಿ: ಸಿದ್ದು ಪಾಟೀಲ್‌