ಶ್ರದ್ಧೆ, ಆಸಕ್ತಿಯಿಂದ ಓದಿದರೆ ಖಂಡಿತ ಯಶಸ್ಸು ಸಾಧ್ಯ: ಶಾಸಕ ಎಚ್.ಟಿ.ಮಂಜು

KannadaprabhaNewsNetwork | Published : Feb 14, 2024 2:19 AM

ಸಾರಾಂಶ

ಪೋಷಕರು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿ ಶಿಕ್ಷಣ ಕೊಡಿಸುತ್ತಿರುವುದು ಸಂತಸದ ವಿಷಯವಾಗಿದೆ. ಅಕ್ಕಿಹೆಬ್ಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆದ ಹಲವು ಮಂದಿ ಇಂದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು, ಕೀರ್ತಿ ತಂದಿದ್ದಾರೆ. ಅದರಂತೆ ನೀವುಗಳೂ ಸಹ ಚೆನ್ನಾಗಿ ಓದಿ ನಿಮ್ಮ ಗ್ರಾಮಕ್ಕೆ, ತಾಲೂಕಿಗೆ ಕೀರ್ತಿ ತರುವ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ಓದಿದರೆ ಖಂಡಿತವಾಗಿಯೂ ಶೈಕ್ಷಣಿಕವಾಗಿ ಯಶಸ್ಸು ಪಡೆಯಬಹುದು ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.

ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಅಕ್ಕಿಹೆಬ್ಬಾಳು ಗ್ರಾಮವು ಶೈಕ್ಷಣಿಕ, ಸಾಹಿತ್ಯಾತ್ಮಕ ಹಾಗೂ ಧಾರ್ಮಿಕವಾಗಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿರುವ ದೊಡ್ಡ ಗ್ರಾಮವಾಗಿದೆ ಎಂದರು.

ಪೋಷಕರು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿ ಶಿಕ್ಷಣ ಕೊಡಿಸುತ್ತಿರುವುದು ಸಂತಸದ ವಿಷಯವಾಗಿದೆ. ಈ ಶಾಲೆಯಲ್ಲಿ ಶಿಕ್ಷಣ ಪಡೆದ ಹಲವು ಮಂದಿ ಇಂದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು, ಕೀರ್ತಿ ತಂದಿದ್ದಾರೆ. ಅದರಂತೆ ನೀವುಗಳೂ ಸಹ ಚೆನ್ನಾಗಿ ಓದಿ ನಿಮ್ಮ ಗ್ರಾಮಕ್ಕೆ, ತಾಲೂಕಿಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದರು.

ಸಮಾಜಸೇವಕ ಎ.ಆರ್.ರಘು ಮಾತನಾಡಿ, ನಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಲ್ಲಾ ಸೌಲಭ್ಯಗಳಿವೆ. ಸರ್ಕಾರಿ ಶಾಲೆಯನ್ನು ಉಳಿಸಿ, ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಸರ್ಕಾರಿ ಶಾಲೆಗೆ ಕಳುಹಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸೈಯದ್ ಉಮರ್, ಜಾಮಿಯ ಮಸೀದಿ ಅಧ್ಯಕ್ಷ ತಾಹಿರ್ ಅಹಮದ್, ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್, ಗ್ರಾಪಂ ಅಧ್ಯಕ್ಷ ಹರೀಶ್, ಮುಖ್ಯ ಶಿಕ್ಷಕ ಜಿ.ಎನ್.ರವಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶೀವರಾಮೇಗೌಡ, ರಾಜ್ಯ ಪರಿಷತ್ ಸದಸ್ಯ ಎಚ್.ಕೆ.ಮಂಜುನಾಥ್, ಹಿರಿಯ ಉಪಾದಯಕ್ಷ ಆನಂದ್‌ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ಕಾರ್ಯದರ್ಶಿ ಲಕ್ಷ್ಮಣಗೌಡ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಲ್.ಎಸ್.ಧರ್ಮಪ್ಪ, ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ಶಾಲಾ ಶಿಕ್ಷಕರು, ಗ್ರಾಮದ ಸಾರ್ವಜನಿಕರು, ಮುಖಂಡರಗಳು ಹಾಜರಿದ್ದರು.

Share this article