ಸವಲತ್ತು ಪಡೆಯಲು ಸಂಫಟನೆ ಅಗತ್ಯ: ವೈ.ಸಂಪಂಗಿ

KannadaprabhaNewsNetwork |  
Published : May 03, 2026, 01:45 AM IST
ಪೊಟೋ೨ಸಿಪಿಟಿ೧: ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತು ಹಾಗೂ ನ್ಯಾಯ ದೊರಕಬೇಕಾದರೆ ಅದು ಸಂಘಟನೆಯಿಂದ ಮಾತ್ರ ಸಾಧ್ಯ ಎಂದು ದಲಿತ ಹಿಂದುಳಿದ ಅಲ್ಪ ಸಂಖ್ಯಾತರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ವೈ.ಸಂಪಂಗಿ ತಿಳಿಸಿದರು

ಚನ್ನಪಟ್ಟಣ: ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತು ಹಾಗೂ ನ್ಯಾಯ ದೊರಕಬೇಕಾದರೆ ಅದು ಸಂಘಟನೆಯಿಂದ ಮಾತ್ರ ಸಾಧ್ಯ ಎಂದು ದಲಿತ ಹಿಂದುಳಿದ ಅಲ್ಪ ಸಂಖ್ಯಾತರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ವೈ.ಸಂಪಂಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ದಲಿತರು, ಬಡವರು, ಹಿಂದುಳಿದವರಿಗೆ ಸರ್ಕಾರದ ಸವಲತ್ತು ಕಲ್ಪಿಸುವ ನಿಟ್ಟಿನಲ್ಲಿ ದಲಿತ ಹಿಂದುಳಿದ ಅಲ್ಪ ಸಂಖ್ಯಾತರ ಸಮಿತಿಯನ್ನು ಎಲ್ಲಾ ಜಿಲ್ಲೆಯಲ್ಲೂ ಅಸ್ತಿತ್ವಕ್ಕೆ ತರಲಾಗಿದೆ. ಈ ಸಂಘಟನೆ ಕಳೆದ ೩೦ ವರ್ಷಗಳಿಂದ ರಾಜ್ಯದಲ್ಲಿ ಸಕ್ರಿಯವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ ಈ ಭಾಗದಲ್ಲಿ ಸಂಘಟನೆ ನೊಂದವರಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಸಂಘಟನೆಯ ಜಿಲ್ಲಾ ಘಟಕವನ್ನು ರಚಿಸಲಾಗಿದೆ. ಜಿಲ್ಲಾಧ್ಯಕ್ಷರಾಗಿ ಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹಮೂರ್ತಿಯನ್ನು ಆಯ್ಕೆ ಮಾಡಿದ್ದು, ಇವರೊಂದಿಗೆ ೨೫ಕ್ಕೂ ಹೆಚ್ಚು ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಘಟನೆ ಯಾವುದೇ ಜಾತಿ, ಪಕ್ಷ ಅಥವಾ ಧರ್ಮಕ್ಕೆ ಗುರುತಿಸಿಕೊಂಡಿರುವ ಸಂಘಟನೆಯಲ್ಲ, ಬದಲಿಗೆ ಸಮಾಜದಲ್ಲಿ ಎಲ್ಲಾ ಜಾತಿ ಜನಾಂಗದಲ್ಲೂ ಬಡವರು, ನೊಂದವರು, ಅನ್ಯಾಯಕ್ಕೆ ಒಳಗಾದವರಿದ್ದು ಅವರಿಗೆ ಸಂಘಟನೆಯ ಮೂಲಕ ಹೋರಾಟದ ಶಕ್ತಿ ನೀಡಲಾಗುವುದು. ಅವರಿಗೆ ನ್ಯಾಯದೊರಕಿಸಿ ಕೊಡುವುದೇ ಸಂಘಟನೆಯ ಮೂಲ ಧ್ಯೇಯವಾಗಿದೆ ಎಂದು ಹೇಳಿದರು.

ನಮ್ಮ ಸಂಘಟನೆಯ ಮೂಲಕ ಹೋರಾಟ ನಡೆಸಿ, ಬಡವರಿಗೆ, ದೀನ ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ನೊಂದವರಿಗೆ ಸರ್ಕಾರದ ಸೌವಲತ್ತು ಗಳನ್ನು ದೊರಕಿಸಿಕೊಡುವ ಕೆಲಸವನ್ನು ಸಂಘಟನೆಯ ಪದಾಧಿಕಾರಿಗಳು ಮಾಡುತ್ತಾರೆ ಎಂದು ತಿಳಿಸಿದರು.

ಸಂಘದ ಎಲ್ಲಾ ಪದಾಧಿಕಾರಿಗಳು ಜಿಲ್ಲೆಯಲ್ಲಿ ಸಂಘಟನೆಯನ್ನು ಗಟ್ಟಿಗೊಳಿಸುವ ಮೂಲಕ ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನೀವೆಲ್ಲ ಒಗಟ್ಟಿನಿಂದ ಹೋರಾಟ ನಡೆಸಿ ಸರ್ಕಾರದ ಗಮನವನ್ನು ಸಳೆದು ಸಮಾಜದಲ್ಲಿ ನ್ಯಾಯದೊರಕಿಸಿಕೊಡುವ ಕೆಲಸವನ್ನು ಮಾಡಬೇಕು ಎಂದು ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ನೂತನ ಪದಾಧಿಕಾರಿಗಳು: ದಲಿತ ಹಿಂದುಳಿದ ಅಲ್ಪ ಸಂಖ್ಯಾತರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹಮೂರ್ತಿ, ಬಿ.ಸಿ.ಶಿವಾನಂದ, ಉಪಾಧ್ಯಕ್ಷರಾಗಿ ಶಿವರಾಜು ಜೆ.ಎಲ್., ಪುನೀತ್, ಜಿಲಾನ್ ವೆಂಕಟೇಶ್, ಆಹಮದ್, ಚಿಕ್ಕಚೌಡಯ್ಯ, ಅರುಣಾ, ಅಮರೀನ್, ಸಂಘಟನಾ ಕಾರ್ಯದರ್ಶಿಯಾಗಿ ಆಟೋಶಿವರಾಜ್, ಪುಟ್ಟಸ್ವಾಮಿ, ವೆಂಕಟೇಶ್, ಕಿರಣ್ ಕುಮಾರ್ ಎಂ., ಬಸವರಾಜ, ಸೈಯದ್, ಬೈರರಾಜು, ಚಿಕ್ಕವೆಂಕಟಪ್ಪ, ಕಿರಣ್ ಕುಮಾರ್ ಆಯ್ಕೆಯಾಗಿದ್ದಾರೆ.

ಪೊಟೋ೨ಸಿಪಿಟಿ೧:

ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಾಜಿ ಶಾಸಕ ವೈ.ಸಂಪಂಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಜನತೆ ರೇಷ್ಮೆ ಕೃಷಿಯಲ್ಲಿ ತೊಡಗಿಕೊಳ್ಳಿ: ಸಿಎಂ
...ಚೇಳೂರಿಗೆ ಡಿಸಿ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ