ವಿದ್ಯಾರ್ಥಿಗಳು ಜೀವನದಲ್ಲಿ ಸಿಕ್ಕ ಅವಕಾಶ ಬಳಸಿದರೆ ಯಶಸ್ಸು ಸಾಧ್ಯ: ಡಾ.ಎಂ.ವೆಂಕಟೇಶ್‌ ಕರೆ

KannadaprabhaNewsNetwork |  
Published : Aug 13, 2024, 01:02 AM IST
ನರಸಿಂಹರಾಜಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ವಿವಿಧ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಶಿವಮೊಗ್ಗ ಡಿ.ವಿ.ಎಸ್‌.ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಮಾತನಾಡಿದರು | Kannada Prabha

ಸಾರಾಂಶ

ವಿದ್ಯಾರ್ಥಿಗಳು ಅವಕಾಶ ಸಿಕ್ಕಾಗ ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಿದರೆ ಜೀವನದಲ್ಲಿ ಮುಂದೆ ಬರಬಹುದು ಎಂದು ಶಿವಮೊಗ್ಗದ ಡಿವಿಎಸ್‌ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್‌ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ವಿದ್ಯಾರ್ಥಿಗಳು ಅವಕಾಶ ಸಿಕ್ಕಾಗ ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಿದರೆ ಜೀವನದಲ್ಲಿ ಮುಂದೆ ಬರಬಹುದು ಎಂದು ಶಿವಮೊಗ್ಗದ ಡಿವಿಎಸ್‌ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್‌ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸೋಮವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24 ನೇ ಸಾಲಿನ ಸಾಂಸ್ಕೃತಿಕ,ಕ್ರೀಡೆ,ಎನ್‌ಎಸ್‌ಎಸ್‌ ಹಾಗೂ ಇತರ ವೇದಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮಿಸುವ ಕೈಗಳಿಗಿಂತ ದುಡಿಯುವ ಕೈಗಳೇ ಮುಖ್ಯವಾಗುತ್ತದೆ. ಆದರೆ, ಇಂದು ಅತಿಯಾದ ಮೊಬೈಲ್‌ ಬಳಕೆಯಿಂದ ಅದೇ ಕೈಗಳು ಸೋಮಾರಿ ಗಳಾಗುತ್ತಿದೆ. ವಿದ್ಯಾರ್ಥಿಗಳು ಒಂದು ಮಿತಿಯಲ್ಲಿ ಮೊಬೈಲ್‌ ಬಳಸಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿರ್ಗಳೇ ಮೊಬೈಲ್‌ ವಿರೋಧಿಸುವ ದಿನ ಬರಬಹುದಾಗಿದೆ ಎಂದರು.

ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ನಮ್ಮ ಪ್ರತಿ ಬಿಂಬವನ್ನು ನಾವೇ ನೋಡಿಕೊಳ್ಳಬೇಕು. ನಾನು ಎಂಬ ಅಹಂಕಾರ ಬಿಟ್ಟು ತಾಳ್ಮೆಯಿಂದ ಜೀವನ ಎದುರಿಸಬೇಕು. ದೇಶದಲ್ಲಿ ತಾರತಮ್ಯ ವಿರೋಧಿಸಬೇಕು. ಪ್ರತಿಯೊಬ್ಬರೂ ಸಮಾನ ರಾಗಿರಬೇಕು. ಅಸಮಾನತೆ ಬಂದರೆ ದೇಶವೇ ಚಿದ್ರವಾಗುವ ಪರಿಸ್ಥಿತಿ ಬರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಸಮಾಜದಲ್ಲಿ ಬೋಗ ಸಂಸ್ಕೃತಿ ಜಾಸ್ತಿಯಾಗುತ್ತಿದೆ. ಈ ಸಂಸ್ಕೃತಿ ಕಡಿಮೆ ಮಾಡಿ ತ್ಯಾಗ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಬೆಳೆಸಿ ಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ ಎಲ್‌.ಶೆಟ್ಟಿ ಮಾತನಾಡಿ, ಈ ಹಿಂದೆ ಈ ಕಾಲೇಜಿಗೆ ಆಗ ವಿಧಾನ ಪರಿಷತ್‌ ಸದಸ್ಯರಾಗಿದ್ದ ಎಂ.ಶ್ರೀನಿವಾಸ್‌ ಅನುದಾನ 10 ಲಕ್ಷದಲ್ಲಿ ವಿಶಾಲವಾದ ಕಾಂಪೌಂಡ್‌ ನಿರ್ಮಾಣವಾಗಿತ್ತು. ಕಾಲೇಜಿಗೆ ಬರುವ ರಸ್ತೆಗೆ ಶಾಸಕ ಟಿ.ಡಿ.ರಾಜೇಗೌಡ 20 ಲಕ್ಷ ಮಂಜೂರು ಮಾಡಿದ್ದು ರಸ್ತೆ ಕಾಮಗಾರಿ ನಡೆದಿದೆ. ಕಾಲೇಜಿನ ರಂಗಮಂದಿರ ನಿರ್ಮಾಣಕ್ಕೆ 1 ಕೋಟಿ ಅನುದಾನ ನೀಡುವಂತೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್‌ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ ಎಂದರು.

ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ಮಾತನಾಡಿ, ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಮುಂದೆ ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ಶಿಕ್ಷಕ ಕಲಿತ ಕಾಲೇಜನ್ನು ಮರೆಯಬಾರದು. ಕಾಲೇಜಿನಲ್ಲಿ ಕಲಿತಿರುವುದನ್ನು ನಿಮ್ಮ ಜೀವನದಲ್ಲೂ ಅಳವಡಿಸಿ ಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾನವೀಯತೆ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಡಾ.ಧನಂಜಯ ಮಾತನಾಡಿ, ಸಕಾರಾತ್ಮಕ ಚಿಂತನೆ, ಕಠಿಣ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ. ಕಾಲೇಜಿನಲ್ಲಿ ಶಿಸ್ತು, ಫಲಿತಾಂಶ ಹೆಚ್ಚಳಕ್ಕೆ ಹಲವು ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕಿರಣ್‌, ಬಿನು, ಕೆ.ಸುರೇಶ್‌, ದೇವಂತ ರಾಜ್, ಸೇವಿಯಾರ್‌, ಅಶ್ವಿನ್‌, ಶಶಿಧರ್‌, ಶಿಲ್ಪ,ಕಾಲೇಜಿನ ಇತಿಹಾಸ ಸಹ ಪ್ರಾಧ್ಯಾಪಕ ಡಿ.ನಾಗೇಶಗೌಡ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ.ಜೆ.ಮಂಜುನಾಥ್ ಹಾಗೂ ವಿವಿಧ ವೇದಿಕೆ ಮುಖ್ಯಸ್ಥರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಬಿ.ಎಸ್‌.ಡಬ್ಯ್ಲೂವಿಷಯದಲ್ಲಿ 2 ನೇ ರ್ಯಾಂಕ್‌ ಪಡೆದ ಕು. ಇಸ್ರಿತ್‌ ಭಾನು ಅವರನ್ನು ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ