ಚೆಸ್ ಪಾರ್ಕ್ ಉದ್ಘಾಟಿಸಿದ ಶಾಸಕಕನ್ನಡಪ್ರಭ ವಾರ್ತೆ ಶಿರಸಿ
ತಾಲೂಕಿನ ಇಸಳೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ₹8 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಚೆಸ್ ಪಾರ್ಕ್ ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನದಲ್ಲಿ ಶಿಕ್ಷಣ ಇಲ್ಲವಾದರೆ ಬೆಲೆ ಇಲ್ಲ. ಸತತ ಪ್ರಯತ್ನದಲ್ಲಿ ತೊಡಗಿಕೊಂಡಾಗ ಸಾಧಿಸಬಹುದು. ಚದುರಂಗ ಬುದ್ಧಿವಂತರ ಕ್ರೀಡೆಯಾಗಿದ್ದು, ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ವ್ಯಯ ಮಾಡುತ್ತಿದೆ. ದಿನದ 24 ಗಂಟೆಯಲ್ಲಿ 18 ತಾಸು ಪರಿಶ್ರಮದಿಂದ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಗೆಲ್ಲಬೇಕು ಎಂಬ ಇಚ್ಛೆ ಬಂದಾಗ ಪ್ರತಿ ಆಟದಲ್ಲಿ ಗೆಲುವು ಸಾಧಿಸಬಹುದು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗಿ ಪ್ರತಿಯೊಬ್ಬರು ಚೆಸ್ ಪಾರ್ಕ್‌ನ ಸದುಪಯೋಗಪಡೆದುಕೊಳ್ಳಬೇಕು ಎಂದರು.ಸಹಾಯಕ ಆಯುಕ್ತೆ ಕೆ.ವಿ. ಕಾವ್ಯಾರಾಣಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿಕೆಗೆ ಉತ್ತಮ ವಾತಾವಣವನ್ನು ಸರ್ಕಾರ ಕಲ್ಪಿಸುತ್ತಿದ್ದು, ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದಾಗ ದೇಶ ಅಭಿವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣದಿಂದ ತಮ್ಮಲ್ಲಿರುವ ಕೌಶಲ್ಯಾಭಿವೃದ್ಧಿಪಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳಬೇಕು. ಕಲಿತ ಶಾಲೆ, ಕಲಿಸಿದ ಗುರುಗಳು, ಸಮಾಜದಿಂದ ಪಡೆದುಕೊಂಡಿರುವುದನ್ನು ಪುನಃ ಸಮಾಜಕ್ಕೆ ಅರ್ಪಣೆ ಮಾಡಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಪ್ರೌಢಶಾಲೆ ದೈಹಿಕ ಶಿಕ್ಷಕ, ತಾಲೂಕು ಯುವಜನ ಸೇವೆ ಹಾಗೂ ಕ್ರೀಡಾಧಿಕಾರಿ ಮತ್ತು ಸರ್ಕಾರಿ ನೌಕರರ ಸಂಘದ ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷ ಕಿರಣಕುಮಾರ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.
ಅರಣ್ಯ ಇಲಾಖೆಯ ಅಧಿಕಾರಿಗಳು ಸುಖಾಸುಮ್ಮನೆ ಸಮಸ್ಯೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಶಾಸಕರ ಬಳಿ ತಮ್ಮ ಅಳಲು ತೋಡಿಕೊಂಡಾಗ, ಪ್ರತಿಕ್ರಿಯಿಸಿದ ಶಾಸಕರು, ಅರಣ್ಯ ಸಂಪತ್ತು ತೆರೆದ ಖಜಾನೆಯಾಗಿದ್ದು, ರೈತರಿಂದ ಅರಣ್ಯ ಉಳಿದುಕೊಂಡಿದೆ ಎಂಬುದನ್ನು ಇಲಾಖೆ ಅರ್ಥ ಮಾಡಿಕೊಳ್ಳಬೇಕು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರಿಗೆ ತೊಂದರೆ ನೀಡುವುದನ್ನು ಸಹಿಸುವುದಿಲ್ಲ. ರೈತರಿಗೆ ಸಮಸ್ಯೆ ನೀಡಿದರೆ ನಾನು ಎದುರು ಬಂದು ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.