ನಿರಂತರ ಓದಿನಿಂದ ಯಶಸ್ಸು ಸಾಧ್ಯ: ಸಿ.ಚಲುವಯ್ಯ

KannadaprabhaNewsNetwork |  
Published : Feb 08, 2026, 02:00 AM IST
7ಕೆಎಂಎನ್ ಡಿ26 | Kannada Prabha

ಸಾರಾಂಶ

ಸಾಮಾನ್ಯ ವಿದ್ಯಾರ್ಥಿಯೂ ತೇರ್ಗಡೆಯಾಗಲು ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಅಂಕಗಳನ್ನು ಪಡೆಯಬೇಕು. ಮೂರು ಮಾದರಿ ಪ್ರಶ್ನೆಪತ್ರಿಕೆ ಮತ್ತು ಪ್ರಶ್ನೆ ಕೋಶವನ್ನು ಬಿಡುಗಡೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿಗಳು ಗುರಿಯೊಂದಿಗೆ ನಿರಂತರವಾಗಿ ಓದಿನಲ್ಲಿ ತಲಿನರಾದರೆ ಯಶಸ್ಸು ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಸಿ.ಚಲುವಯ್ಯ ಹೇಳಿದರು.

ತಾಲೂಕಿನ ಶೀಳನೆರೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡೆ-ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ವ್ಯಾಸಂಗಕ್ಕೆ ಎಷ್ಟು ಶ್ರಮ ಹಾಕುತ್ತಾರೋ ಅವರ ಹಿಂದೆ ಯಶಸ್ಸು ಹಿಂಬಾಲಿಸುತ್ತದೆ. ದ್ವಿತೀಯ ಪಿಯುಸಿ ಪ್ರತಿಯೊಬ್ಬರ ಬದುಕಿಗೆ ಮಹತ್ವದ ತಿರುವಾಗಿದೆ. ಈ ಸಮಯವನ್ನು ಚೆನ್ನಾಗಿ ಬಳಸಿಕೊಂಡರೆ ಸಾಧನೆಯ ದಿಕ್ಕಿನತ್ತ ಸಾಗಬಹುದು ಎಂದರು.

ಸಾಮಾನ್ಯ ವಿದ್ಯಾರ್ಥಿಯೂ ತೇರ್ಗಡೆಯಾಗಲು ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಅಂಕಗಳನ್ನು ಪಡೆಯಬೇಕು. ಮೂರು ಮಾದರಿ ಪ್ರಶ್ನೆಪತ್ರಿಕೆ ಮತ್ತು ಪ್ರಶ್ನೆ ಕೋಶವನ್ನು ಬಿಡುಗಡೆ ಮಾಡಲಾಗಿದೆ. ಇವನ್ನು ಓದಿದರೆ ಸಾಮಾನ್ಯ ವಿದ್ಯಾರ್ಥಿಗಳು ಉತ್ತೀರ್ಣರಾಗುವದು ಕಷ್ಟವಲ್ಲ ಎಂದು ಹೇಳಿದರು.

ಜಿಲ್ಲೆ ಈ ಬಾರಿ ಫಲಿತಾಂಶದಲ್ಲಿ 10ನೇ ಸ್ಥಾನದೊಳಗೆ ಬರಬೇಕೆಂಬ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಪೋಷಕರು, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯ ನಿವೃತ್ತ ಡಿಡಿಪಿಯು ನಾಗರಾಜು, ಕೆ.ಆರ್.ಪೇಟೆ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಕೆ.ಮೋಹನ್, ಕಾಲೇಜು ಪ್ರಾಂಶುಪಾಲ ಕತ್ತರಘಟ್ಟ ವಾಸು, ತೆಂಡೇಕೆರೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್, ಉಪನ್ಯಾಸಕರಾದ ಮಹೇಶ್, ವೆಂಕಟೇಶ್, ಬಸವರಾಜು, ಪ್ರೇಮ, ಪವಿತ್ರಾ, ಪ್ರೌಢಶಾಲೆ ಶಿಕ್ಷಕಿ ನೀಲಮ್ಮ, ಶಿಕ್ಷಕ ಬಿ.ಎಂ.ಪ್ರಕಾಶ್ ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಮಹಿಳೆಯರು ಸ್ವ ಉದ್ಯೋಗದೊಂದಿಗೆ ಆರ್ಥಿಕವಾಗಿ ಸದೃಢರಾಗಬೇಕು: ಜಿ.ಎಸ್.ವೆಂಕಟೇಶ್

ಮದ್ದೂರು:

ಮಹಿಳೆಯರು ಸ್ವ ಉದ್ಯೋಗ ಪ್ರಾರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಜ್ ಇಂಡಿಯಾ ಟ್ರಸ್ಟ್ ಯೋಜನಾ ವ್ಯವಸ್ಥಾಪಕ ಜಿ.ಎಸ್.ವೆಂಕಟೇಶ್ ತಿಳಿಸಿದರು.

ನಗರದ ನಂಜಪ್ಪ ಕಲ್ಯಾಣ ಮಂಟಪದಲ್ಲಿ ಈಚೆಗೆ ಬಜ್ ವುಮೆನ್ ಸಂಸ್ಥೆ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ, ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿರುವುದು ಮೆಚ್ಚುಗೆ ವಿಷಯ. ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ತಮ್ಮ ಇಷ್ಟದ ಕ್ಷೇತ್ರದಲ್ಲಿ ತರಬೇತಿ ಪಡೆದು ಸ್ವ ಉದ್ಯೋಗ ಆರಂಭಿಸಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.

ಬಜ್ ಇಂಡಿಯಾ ಟ್ರಸ್ಟ್ ಮಹಿಳೆಯರು ಸ್ವಾವಲಂಬಿಯಾಬೇಕು ಎಂಬ ಉದ್ದೇಶದಿಂದ ಹಲವು ಯೋಜನೆ ರೂಪಿಸುತ್ತಿದ್ದಾರೆ. ಮಹಿಳೆಯರು ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಂದಿನಿ ಮಾತನಾಡಿ, ಸರ್ಕಾರ ಮತ್ತು ಸಂಘ, ಸಂಸ್ಥೆಗಳು ಮಹಿಳೆಯರಿಗೆ ಹಲವು ರೀತಿಯ ಸೌಲಭ್ಯ ನೀಡುತ್ತಿದೆ. ಇದರ ಸದ್ಬಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಮನವಿ ಮಾಡಿದರು.

ಈ ವೇಳೆ ಬಜ್ ವುಮೆನ್ ಸಂಸ್ಥೆ ವ್ಯವಸ್ಥಾಪಕ ಬಾಲಕೃಷ್ಣ, ಮಹಿಳಾ ಮುನ್ನಡೆ ಪಡೆಯ ರಾಜ್ಯ ಕಾರ್ಯದರ್ಶಿ ಜಿ.ಪೂರ್ಣಿಮಾ, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಟಿ.ಪ್ರಸನ್ನಕುಮಾರ್, ಜಿಲ್ಲಾ ಮಹಿಳಾ ಘಟಕದ ಸಂಯೋಜಕಿ ಶೋಭಾ, ಬಜ್ ಸಂಸ್ಥೆ ತರಬೇತಿದಾರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ