ಕನ್ನಡಪ್ರಭ ವಾರ್ತೆ ಮೈಸೂರು
ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದ್ದು ಬೋರ್ಡ್ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯಲ್ಲಿ ಸರಿಯಾದ ಮಾರ್ಗದರ್ಶನ ಬಹಳ ಮುಖ್ಯ ಎಂದರು.
ಸಾಧಕರಿಂದ ಅವರ ಅಧ್ಯಯನ ವಿಧಾನ, ಸಮಯ ನಿರ್ವಹಣೆ, ಪರೀಕ್ಷಾ ತಯಾರಿ ಹಾಗೂ ಯಶಸ್ಸಿನ ರಹಸ್ಯಗಳ ಬಗ್ಗೆ ತಿಳಿದುಕೊಳ್ಳುವ ಅವಕಾಶ ವಿದ್ಯಾರ್ಥಿಗಳಿಗೆ ದೊರತಿದೆ. ಪ್ರತಿ ವಿದ್ಯಾರ್ಥಿಯಲ್ಲಿಯೂ ಅಪಾರ ಸಾಮರ್ಥ್ಯ ಅಡಗಿದ್ದು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿ ನಿರಂತರವಾಗಿ ಪ್ರಯತ್ನಿಸಿದರೆ ಯಶಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು ಅವರು ಹೇಳಿದರು.ಕಠಿಣ ಪರಿಶ್ರಮಕ್ಕೆ ಯಾವುದೇ ಪರ್ಯಾಯವಿಲ್ಲ. ಏಕಾಗ್ರತೆ, ಸಮಯದ ನಿರ್ವಹಣೆ, ದೇವತಾನುಗ್ರಹ , ತಂದೆ-ತಾಯಿ ಹಾಗೂ ಗುರು ಹಿರಿಯರಲ್ಲಿ ಗೌರವದ ಮನೋಭಾವ ವಿದ್ಯಾರ್ಥಿಗಳಲ್ಲಿ ಅತ್ಯವಶ್ಯಕ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಸಂಸ್ಕೃತಿ, ಶಿಸ್ತು ಮತ್ತು ಶ್ರದ್ಧೆ ಎಂಬ ಬುನಾದಿಯ ಮೇಲೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸರಿಯಾದ ಯೋಚನೆ, ಯೋಜನೆ ಮತ್ತು ವೇಳಾಪಟ್ಟಿಯನ್ನು ತಯಾರಿಸಿ ಅದನ್ನು ಕಾರ್ಯರೂಪಕ್ಕೆ ತರಬೇಕು. ನಿಗದಿತ ಪಠ್ಯಪುಸ್ತಕ ಮತ್ತು ಪರಾಮರ್ಶನ ಪುಸ್ತಕಗಳನ್ನು ಓದಿ ಪರೀಕ್ಷೆಗೆ ಸಿದ್ಧತೆ ನಡೆಸಬೇಕು ಎಂದು ಅವರು ಸಲಹೆ ನೀಡಿದರು.
ವಿದ್ಯಾರ್ಥಿಗಳಾದ ಕವನ ಮತ್ತು ಉತ್ಸಾ ಶ್ರೀನಾಥ್ ಪ್ರಾರ್ಥಿಸಿದರು. ತ್ರಿಶಾ ಸ್ವಾಗತಿಸಿದರು. ಆರ್ಯನ್ ವಂದಿಸಿದರು. ಚಿನ್ಮಯಿ ನಿರೂಪಿಸಿದರು.