ಕನ್ನಡಪ್ರಭ ವಾರ್ತೆ ತಿಪಟೂರು
ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾನಿಲಯದ ಎಂಬಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ ಮಾತನಾಡಿದ ಅವರು, ನಮ್ಮ ಸಂಸ್ಥೆಯು ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಹಗಲಿರುಳು ಶ್ರಮಿಸುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳ ದಾರಿದೀಪವಾಗಿದೆ ಎಂದರು.
ಬೆಂಗಳೂರಿನ ಡಬ್ಲ್ಯುಪಿಪಿ ಇಂಡಿಯಾ ಐಟಿಯ ಕಾರ್ಯಕ್ರಮ ವ್ಯವಸ್ಥಾಪಕ ಡಾ. ಮಹೇಶ್‌ಪವನ್ ಸಾತವಳ್ಳಿ ಮಾತನಾಡಿ. ಈಗಿನ ಕಾಲಕ್ಕೆ ಹಣಬಲವೊಂದೆ ಬಲವಲ್ಲ. ಮನುಷ್ಯನ ಜ್ಞಾನವೇ ನಿಜವಾದ ಬಲ. ವಿದ್ಯಾರ್ಥಿಗಳು ಸಂಕುಚಿತ ಅವಶ್ಯಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದರು.ಸಂಸ್ಥೆಯ ಖಜಾಂಚಿ ಬಿ.ಎಸ್. ಶಿವಪ್ರಸಾದ್ ಮಾತನಾಡಿದರು. ಪ್ರಾಂಶುಪಾಲ ಡಾ.ಜಿ.ಡಿ. ಗುರುಮೂರ್ತಿ ವಿದ್ಯಾರ್ಥಿಗಳನ್ನು ಸ್ವಾಗತ್ತಿಸುತ್ತಾ, ಕಾಲೇಜಿನಲ್ಲಿರುವ ಎಲ್ಲಾ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಶ್ರದ್ಧೆಯಿಂದ ತರಗತಿಗಳಿಗೆ ಹಾಜರಾಗಿ ಉತ್ತಮ ವಿದ್ಯಾರ್ಥಿಗಳಾಗಬೇಕೆಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜ್, ಬಿ.ಎಸ್. ಉಮೇಶ್, ಜಿ.ಪಿ. ದೀಪಕ್, ಬಿ.ಎಸ್. ಬಸವರಾಜು, ಕಾರ್ಯದರ್ಶಿಗಳಾದ ಜಿ.ಎಸ್. ಉಮಾಶಂಕರ್, ಎಂ.ಆರ್. ಸಂಗಮೇಶ್, ಬಿ.ಯು. ಜಗದೀಶ್‌ಮೂರ್ತಿ, ಎಚ್.ಜಿ. ಸುಧಾಕರ್ ವಿದ್ಯಾರ್ಥಿಗಳಿಗೆ ಶುಭಕೋರಿದರು.