ಯಲ್ಲಾಪುರ:
ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ, ಮೀಡಿಯಾ ಸ್ಕೂಲಿನ ಯೂಟ್ಯೂಬ್ ಚಾನಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುನ್ನಡೆಸುತ್ತಿರುವ ಹರಿಪ್ರಕಾಶ ಕೋಣೇಮನೆ, ಸಂಸ್ಥೆಗೆ ಪುನರುಜ್ಜೀವದ ಕಾಯಕಲ್ಪ ನೀಡಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಸ್ಕಾರಭರಿತ ಶಿಕ್ಷಣ ನೀಡುತ್ತಿದ್ದಾರೆ ಎಂದ ಅವರು, ಮೊಬೈಲ್ ಬಳಕೆಯೇ ಒಂದು ಟ್ರೆಂಡ್ ಆಗಿ ಬೆಳೆಯುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ವಿಶ್ವದರ್ಶನದಲ್ಲಿ ಶಿಸ್ತುಬದ್ಧ, ಸಂಸ್ಕಾರಯುತ ಶಿಕ್ಷಣ ನೀಡುತ್ತಿದೆ ಎಂದರು.ಪತ್ರಿಕೆಗಳಿಗೆ ಜಾಹೀರಾತೇ ಜೀವಾಳವಾಗಿದೆ ಎಂಬುದನ್ನು ಎಲ್ಲರೂ ಬಲ್ಲರು. ಆದರೆ, ಇತ್ತೀಚಿಗೆ ಓದುಗರ ಸಂಖ್ಯೆಯೂ ಕ್ಷೀಣಿಸುತ್ತಿದೆ ಎಂಬ ಕೆಲವರ ಅಭಿಪ್ರಾಯ ಸರಿಯಾದುದಲ್ಲ ಎಂದರು.
ಮಕ್ಕಳಿಗೆ ಹಣವಿಲ್ಲದೇ ಬದುಕು ರೂಪಿಸಿಕೊಳ್ಳುವ ಕಲೆ ಕಲಿಸಬೇಕೆಂದ ಅವರು, ದೂರದರ್ಶನ ಚಾನಲ್‌ಗಳಿಂದಾಗಿ ಪತ್ರಿಕೆಗಳ ಪ್ರಸಾರಕ್ಕೆ ಯಾವುದೇ ದುಷ್ಪರಿಣಾಮ ಉಂಟಾಗಿಲ್ಲ. ಆದರೂ ಪತ್ರಿಕೋದ್ಯಮ ಮತ್ತು ಪತ್ರಿಕೆಗಳ ಉಳಿವಿಗಾಗಿ ಸಂಘಟಿತ ಪ್ರಯತ್ನ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಿ.ಕೆ. ಗಾಂವ್ಕರ್, ಶಿಕ್ಷಕರಾದ ಶ್ಯಾಮಲಾ ಕೆರೆಗದ್ದೆ, ಪ್ರೇಮಾ ಗಾಂವ್ಕರ, ಪ್ರಾಚಾರ್ಯ ಡಾ. ಎಸ್.ಎಲ್. ಭಟ್ಟ ಸೇರಿದಂತೆ ಇತರರು ಇದ್ದರು. ಕಾರ್ಯಕ್ರಮದಲ್ಲಿ ಆನಂದ ಸಂಕೇಶ್ವರ, ರವೀಂದ್ರ ಭಟ್ಟ ಐನಕೈ ಹಾಗೂ ನಿವೃತ್ತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ ಮತ್ತು ಪ್ರಾಚಾರ್ಯ ನಾಗರಾಜ ಇಳೇಗುಂಡಿ ಅವರನ್ನು ಗೌರವಿಸಲಾಯಿತು.