ಎಸ್‌ಯುಸಿಐ (ಸಿ)ನಿಂದ ರಾಜ್ಯದ 19 ಕ್ಷೇತ್ರಗಳಲ್ಲಿ ಸ್ಪರ್ಧೆ: ರಾಮಾಂಜನಪ್ಪ

KannadaprabhaNewsNetwork |  
Published : Apr 02, 2024, 01:01 AM IST
ಪೋಟೊ1ಕೆಪಿಎಲ್3: ಕೊಪ್ಪಳ ನಗರದ ಮೀಡಿಯಾ ಕ್ಲಬ್‌ನಲ್ಲಿ ಎಸ್‌ಯುಸಿಐ(ಸಿ) ರಾಜ್ಯ ಸೆಕ್ರಟಿರಿಯೆಟ್ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿದರು. | Kannada Prabha

ಸಾರಾಂಶ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ ರಾಜ್ಯದಲ್ಲಿ 19 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ.

ಕನ್ನಡಪ್ರಭ ವಾರ್ತೆ ಕೊಪ್ಪಳ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದಿಂದ ದೇಶದ 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿದೆ. ಅದರಂತೆ ರಾಜ್ಯದಲ್ಲಿ 19 ಕ್ಷೇತ್ರಗಳಲ್ಲಿ ಎಸ್‌ಯುಸಿಐ (ಸಿ) ಪಾರ್ಟಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಸೆಕ್ರೆಟಿರಿಯೆಟ್ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.

ನಗರದ ಮೀಡಿಯಾ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳ ಹಿಂದೆ ಭಾರತದ ಸಾಲ ಸುಮಾರು ₹54 ಲಕ್ಷ ಕೋಟಿ ಇತ್ತು. ಇದು ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ 2014ರ ವರೆಗಿನ ಅಂಕಿ-ಅಂಶ. ಆದರೆ, ಬಿಜೆಪಿ ಸರ್ಕಾರದ ಎರಡು ಆಡಳಿತಾವಧಿಯಲ್ಲಿ ಭಾರತದ ಸಾಲ 2014ಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಾಗಿದೆ. ಇನ್ನು ಅಭಿವೃದ್ಧಿ ವಿಚಾರದಲ್ಲಿ ಅಂಬಾನಿ-ಆದಾನಿಯಂಥ ಕೆಲವೇ ಕೆಲವು ವ್ಯಕ್ತಿಗಳು ಸಾಕಷ್ಟು ಪ್ರಗತಿ ಸಾಧಿಸಿದ್ದಾರೆಯೇ ಹೊರತು ಭಾರತದ ಬಡತನ, ನಿರುದ್ಯೋಗ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಿವೆ ಎಂಬುದಕ್ಕೆ ಗರೀಬ್ ಕಲ್ಯಾಣ ಯೋಜನೆಯಡಿ ನೀಡುವ ಪಡಿತರದಿಂದ ಗೊತ್ತಾಗುತ್ತದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಅಲ್ಲ, ಬಿಜೆಪಿ ಹೆಚ್ಚು ಭ್ರಷ್ಟವಾದರೆ, ಕಾಂಗ್ರೆಸ್‌ನಲ್ಲೂ ಭ್ರಷ್ಟಾಚಾರವಿದೆ. ಬಿಜೆಪಿಗೆ ಹೋಲಿಸಿದರೆ ಕಡಿಮೆಯಷ್ಟೇ. ಚುನಾವಣಾ ಬಾಂಡ್‌ನಿಂದ ಅವರ ಬಣ್ಣ ಬಯಲಾಗಿದೆ. ಹಾಗಾಗಿ ದೇಶದ ಜನರಿಗೆ ಬಿಜೆಪಿ-ಕಾಂಗ್ರೆಸ್ ಬದಲಾಗಿ ಮತ್ತೊಂದು ಸಾರ್ವಜನಿಕ ಶಕ್ತಿಯ ಅಗತ್ಯವಿದೆ ಎಂದರು.

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿ ಶರಣು ಗಡ್ಡಿ ಸ್ಪರ್ಧಿಸಲಿದ್ದಾರೆ. ಇವರು ಸಾರ್ವಜನಿಕ ಬದುಕಿನಲ್ಲಿ ಅತ್ಯುತ್ತಮ ಹುದ್ದೆಯಲ್ಲಿದ್ದರೂ ಅದನ್ನು ತೊರೆದು ಜನಪರ ಹೋರಾಟಗಳ ಮೂಲಕ ಪಕ್ಷ ಬಲಪಡಿಸುವ ಆ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ಶರಣು ಗಡ್ಡಿ, ಮುಖಂಡರಾದ ಶರಣಪ್ಪ ಉದ್ಬಾಳ, ಶರಣು ಪಾಟೀಲ, ಗಂಗರಾಜ ಅಳ್ಳಳ್ಳಿ ಉಪಸ್ಥಿತರಿದ್ದರು.

PREV

Recommended Stories

‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ
ಗ್ಯಾರಂಟಿ ಯೋಜನೆಗಳ ಜತೆ ರಾಜ್ಯವು ಅಭಿವೃದ್ಧಿ