ಶಿಕ್ಷಣ ಜೊತೆ ಕೃಷಿಯಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ: ಜಯಣ್ಣ

KannadaprabhaNewsNetwork |  
Published : Sep 11, 2024, 01:01 AM IST
ಪದ್ಮಶ್ರೀ ಪುರಸ್ಕೃತ ಸತ್ಯನಾರಾಯಣ ಬೇಳೇರಿ ಅವರು ಪೊಸ ಒಸರ್‌ ಕಾರ್ಯಕ್ರಮ ಉದ್ಘಾಟಿಸುತ್ತಿರುವುದು | Kannada Prabha

ಸಾರಾಂಶ

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ, ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನದ ವತಿಯಿಂದ ಪೊಸ ಒಸರ್-೨೦೨೪ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರೆದಿದ್ದು, ಶಿಕ್ಷಣದೊಂದಿಗೆ ಕೃಷಿಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ಹೇಳಿದರು.ಅವರು ಮಂಗಳವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ, ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ ಆಯೋಜಿಸಿದ ಪೊಸ ಒಸರ್-೨೦೨೪ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.ಪದ್ಮಶ್ರೀ ಪುರಸ್ಕೃತ ಸತ್ಯನಾರಾಯಣ ಬೇಳೇರಿ ಅವರ ಯೋಜನೆ ಅತ್ಯುತ್ತಮವಾಗಿದ್ದು, ಅನ್ನದಾತೋ ಸುಖೀ ಭವ ಎಂಬುವುದನ್ನು ಮತ್ತೊಮ್ಮೆ ನೆನಪಿಸಿದ್ದಾರೆ. ಈ ರೀತಿಯ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಭಾಗದ ವಿಶೇಷತೆಯನ್ನು ಎಲ್ಲರಿಗೂ ತಿಳಿಸುತ್ತಿರುವುದು ಶ್ಲಾಘನೀಯ ಎಂದರು.ವೈವಿಧ್ಯಮಯ ಭತ್ತದ ತಳಿ ಸಂರಕ್ಷಕ ಪದ್ಮಶ್ರೀ ಪುರಸ್ಕೃತ ಸತ್ಯನಾರಾಯಣ ಬೆಳೇರೆ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತ ಅಲೋಶಿಯಸ್ ಶಿಕ್ಷಣ ಸಮೂಹ ಸಂಸ್ಥೆಗಳ ರೆಕ್ಟರ್, ಸಹ ಕುಲಾಧಿಪತಿ ರೆ.ಫಾ. ಮೆಲ್ವಿನ್ ಜೋಸೆಫ್ ಪಿಂಟೋ ಮಾತನಾಡಿದರು.ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ, ಪರಿಸರ ಮತ್ತು ಕೃಷಿಪರ ಲೇಖಕ ಡಾ. ನರೇಂದ್ರ ರೈ ದೇರ್ಲ ಅವರು ಭತ್ತದ ತಳಿ, ಬೇಸಾಯ, ಅನ್ನದಾತನ ಮಹತ್ವದ ಬಗ್ಗೆ ಮಾತನಾಡಿದರು.

ಪ್ರಮುಖರಾದ ಆಲ್ವಿನ್ ಡೇಸಾ, ಡಾ. ರೊನಾಲ್ಡ್, ಮೆಲ್ವಿನ್ ಡಿ’ಕುನ್ನಾ, ರವೀಂದ್ರ ಸ್ವಾಮಿ, ಕ್ರಿಸ್ಟೋಫರ್ ನೀನಾಸಂ, ಡಾ. ಪ್ರಭು ಕುಮಾರ ಪಿ., ಪ್ರಶಾಂತಿ ಶೆಟ್ಟಿ ಇರುವೈಲು ಮತ್ತಿತರರು ಇದ್ದರು.ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಲಿಂಗ ಭಟ್ ಕೆ. ಸ್ವಾಗತಿಸಿ, ಪ್ರಾಸ್ತವಿಕ ಮಾತನಾಡಿದರು. ಡಾ. ವಿಶ್ವನಾಥ್ ಬದಿಕಾನ ವಂದಿಸಿ, ಡಾ. ದಿನೇಶ್ ನಾಯಕ್ ನಿರೂಪಿಸಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ