ಶ್ವಾನ ಆರೈಕೆ ಕೇಂದ್ರ ನಿರ್ಮಾಣಕ್ಕೆ ಸುಧಾಮೂರ್ತಿ ಭೂಮಿಪೂಜೆ

KannadaprabhaNewsNetwork |  
Published : Oct 30, 2025, 03:00 AM IST
ಶ್ವಾನ ಆರೈಕೆ ಕೇಂದ್ರದ ಕಟ್ಟಡಕ್ಕೆ ರಾಜ್ಯಸಭಾ ಸಂಸದೆ ಡಾ.ಸುಧಾಮೂರ್ತಿ ಭೂಮಿಪೂಜೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ 2025-26ನೇ ಸಾಲಿನ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ವಿಜಯಪುರ ತಾಲೂಕಿನ ಬುರಣಾಪೂರ ಗ್ರಾಮದಲ್ಲಿ ಬುಧವಾರ ಸಮಗ್ರ ಶ್ವಾನ ಆರೈಕೆ ಕೇಂದ್ರ ನಿರ್ಮಾಣ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ 2025-26ನೇ ಸಾಲಿನ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ವಿಜಯಪುರ ತಾಲೂಕಿನ ಬುರಣಾಪೂರ ಗ್ರಾಮದಲ್ಲಿ ಬುಧವಾರ ಸಮಗ್ರ ಶ್ವಾನ ಆರೈಕೆ ಕೇಂದ್ರ ನಿರ್ಮಾಣ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸುಧಾ ಮೂರ್ತಿ ಅವರು, ಸುಪ್ರಿಂ ಕೋರ್ಟ್ ನಿರ್ದೇಶಾನುಸಾರ ಸುಸಜ್ಜಿತ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಈ ಕೇಂದ್ರಕ್ಕೆ ನೀರಿನ ವ್ಯವಸ್ಥೆ, ಎಬಿಸಿ ಸೆಂಟರ್ ನಿರ್ಮಾಣ ಮಾಡಲಾಗಿದ್ದು, ಈ ಕೇಂದ್ರದಲ್ಲಿ ಅನಾರೋಗ್ಯಕ್ಕೊಳಗಾದ, ಗಾಯಗೊಂಡ ಒಟ್ಟು 500 ನಾಯಿಗಳಿಗೆ ಆಶ್ರಯ ಒದಗಿಸಲಾಗುವುದು. ಸಂಸದರ ಪ್ರದೇಶಾಭಿವೃದ್ದಿ ನಿಧಿಯಿಂದ ಎರಡು ಕೋಟಿ ವೆಚ್ಚದಲ್ಲಿ ಈ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಶ್ವಾನಗಳಿಗೆ ಈ ಕೇಂದ್ರ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.

ಈ ವೇಳೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ರಶ್ಮಿ ಪಾಟೀಲ, ಪಾಲಿಕೆ ವೈದ್ಯಾಧಿಕಾರಿ ಎಸ್.ಎಲ್.ಲಕ್ಕಣ್ಣವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ
ಚಳಿ ಹೆಚ್ಚಿದಂತೆ ಏರುತ್ತಿದೆ ಮೊಟ್ಟೆ ದರ