-ಕರ್ನಾಟಕ- ಜಪಾನ್ ಸಹಕಾರ ಬಲಪಡಿಸಲು ವಿಚಾರ ವಿನಿಮಯಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ಮತ್ತು ಜಪಾನ್ ದೇಶಗಳ ನಡುವೆ ಜೈವಿಕ ಇಂಧನ ಕ್ಷೇತ್ರದಲ್ಲಿ ಸಹಕಾರ, ಪಾಲುದಾರಿಕೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ಒಪ್ಪಂದಗಳ ಕುರಿತು ಡೆಪ್ಯೂಟಿ ಜನರಲ್ ಇಂಟರ್‌ನ್ಯಾಷನಲ್ ಬ್ಯುರೋ ತಾರಾ ಕೊನೊ, ಡೆಪ್ಯೂಟಿ ಡೈರೆಕ್ಟರ್ ಜನರಲ್ ಆಫ್ ಇಂಟರ್‌ನ್ಯಾಷನಲ್ ಬ್ಯುರೋ ಕರೆನ್ ನಕಿ ಶೀಮಾ ಅವರೊಂದಿಗೆ ವಿವರವಾದ ಚರ್ಚೆ ನಡೆಸಲಾಗಿದೆ.
ಸಭೆಯಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಗೆ ಲಭ್ಯವಿರುವ ಅವಕಾಶಗಳು, ಸಹಕಾರವನ್ನು ಮತ್ತಷ್ಟು ಬಲಪಡಿಸುವ ಸಾಧ್ಯತೆಗಳು ಹಾಗೂ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಜೈವಿಕ ಇಂಧನ ಕ್ಷೇತ್ರದ ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸಲು ಮಂಡಳಿ ಕೈಗೊಂಡಿರುವ ವಿವಿಧ ಉಪಕ್ರಮಗಳ ಕುರಿತು ವಿವರವಾಗಿ ಚರ್ಚಿಸಲಾಯಿತು ಎಂದು ಎಸ್.ಈ. ಸುಧೀಂದ್ರ ತಿಳಿಸಿದ್ದಾರೆ.ತಂತ್ರಜ್ಞಾನ ವಿನಿಮಯ, ಹೂಡಿಕೆ ಉತ್ತೇಜನ, ವಾಣಿಜ್ಯೀಕರಣ, ಸಂಶೋಧನೆ ಮತ್ತು ನಾವೀನ್ಯತೆ ಹಾಗೂ ಜೈವಿಕ ಇಂಧನ ಕ್ಷೇತ್ರದ ಸುಸ್ಥಿರ ಅಭಿವೃದ್ಧಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ಕರ್ನಾಟಕ ಮತ್ತು ಜಪಾನ್ ದೇಶಗಳ ನಡುವಿನ ಸಹಕಾರವನ್ನು ಬಲಪಡಿಸುವ ಕುರಿತು ಸಭೆಯಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಎರಡೂ ದೇಶಗಳ ಸರ್ಕಾರಗಳಿಗೆ ನೇರವಾಗಿ ಪ್ರಯೋಜನವಾಗುವಂತಹ ಸಕಾರಾತ್ಮಕ ಫಲಿತಾಂಶಗಳನ್ನು ಸಾಧಿಸಲು ಸಾಧ್ಯವಾಗಲಿದೆ ಎಂದು ಎಸ್.ಈ. ಸುಧೀಂದ್ರ ಹೇಳಿದ್ದಾರೆ.
ಜಪಾನ್ ವಿದೇಶಾಂಗ ವ್ಯವಹಾರಗಳ ಇಲಾಖೆಯ ಪ್ರತಿನಿಧಿಗಳನ್ನು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ಭೇಟಿ ಮಾಡಿದರು.